ಕೇಂದ್ರ ಲೋಕ ಸೇವಾ ಆಯೋಗ ಕಂಬೈನ್ಡ್ ಮೆಡಿಕಲ್ ಸರ್ವೀಸಸ್ ಪರೀಕ್ಷೆ 2022ರ ಪ್ರಿಲಿಮಿನರಿ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಯನ್ನು ಬರೆಯಲಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಯುಪಿಎಸ್ಸಿ ಕಂಬೈನ್ಡ್ ಮೆಡಿಕಲ್ ಸರ್ವೀಸಸ್ ಪರೀಕ್ಷೆ ಮೂಲಕ ಒಟ್ಟು 687 ಹುದ್ದೆಗಳನ್ನು ಭರ್ತಿ ಮಾಡಲು ಏಪ್ರಿಲ್ 26,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಅಹ್ವಾನಿಸಲಾಗಿತ್ತು. ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಪರೀಕ್ಷೆಯನ್ನು ಜುಲೈ 17,2022ರಂದು ನಡೆಸಲು ನಿಗದಿಪಡಿಸಲಾಗಿದೆ. ಪ್ರವೇಶ ಪತ್ರ ಬಿಡುಗಡೆಯಾಗಿದ್ದು, ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಯುಪಿಎಸ್ಸಿ ಸಿಎಂಎಸ್ ಪರೀಕ್ಷಾ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್ https://upsc.gov.in/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "e-Admit Card : Combined Medical Services Examination, 2022" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ Link ನ ಕೆಳಗಿರುವ Click Here ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಪಾಸ್‌ವರ್ಡ್ / ಜನ್ಮದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನ ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಿ
ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ.
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.