UPSC CMS Result 2021 : ಫಲಿತಾಂಶ ವೀಕ್ಷಿಸುವುದು ಹೇಗೆ ತಿಳಿಯಿರಿ

ಕೇಂದ್ರ ಲೋಕ ಸೇವಾ ಆಯೋಗ ಕಂಬೈನ್ಡ್ ಮೆಡಿಕಲ್ ಸರ್ವೀಸಸ್ ಪರೀಕ್ಷೆ 2021ರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಇದೀಗ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಯುಪಿಎಸ್ಸಿ ಸಿಎಂಎಸ್ ಪರೀಕ್ಷೆಯ ಫಲಿತಾಂಶ ಪ್ರಕಟ

ಯುಪಿಎಸ್‌ಸಿ ಕಂಬೈನ್ಡ್ ಮೆಡಿಕಲ್ ಸರ್ವೀಸಸ್ ಪರೀಕ್ಷೆ 2021ರ ಬಗ್ಗೆ ಜುಲೈ 7,2021ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಒಟ್ಟು ೮೩೮ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಜುಲೈ 27,2021ರ ಸಂಜೆ 6 ಗಂಟೆಯೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಪರೀಕ್ಷೆಯನ್ನು ನವೆಂಬರ್ 21,2021ರಂದು ನಡೆಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟ ಮಾಡಲಾಗಿದೆ. ಪರೀಕ್ಷೆಯಲ್ಲಿ ಅನೇಕ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದು, ಫಲಿತಾಂಶದ ಕಟ್ ಆಫ್ ಅಂಕಗಳನ್ನು ಶೀಘ್ರದಲ್ಲಿ ತಿಳಿಸಲಾಗುವುದು. ಫಲಿತಾಂಶ ಪಟ್ಟಿಯಲ್ಲಿ ಹೆಸರನ್ನು ಹೊಂದಿರುವ ಅಭ್ಯರ್ಥಿಗಳು ಮುಂದಿನ ಸುತ್ತಿಗೆ ಅಂದರೆ ಸಂದರ್ಶನ ಸುತ್ತಿಗೆ ಅರ್ಹತೆ ಪಡೆದಿರುತ್ತಾರೆ. ಸಂದರ್ಶನ ಸುತ್ತಿನ ದಿನಾಂಕಗಳನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಡಿಎಎಫ್ ಅಥವಾ ಅರ್ಜಿಯಲ್ಲಿ ಕೇಳಲಾಗಿರುವ ಸಂಪೂರ್ಣ ಮಾಹಿತಿಯನ್ನು ಜನವರಿ 4 ರಿಂದ ಜನವರಿ 18,2022ರೊಳಗೆ ಭರ್ತಿ ಮಾಡಬೇಕಿರುತ್ತದೆ. ಇದೀಗ ಅಭ್ಯರ್ಥಿಗಳು ಫಲಿತಾಂಶ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಯುಪಿಎಸ್‌ಸಿ ಸಿಎಂಎಸ್ ಪರೀಕ್ಷಾ ಫಲಿತಾಂಶ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ 'Written Result: Combined Medical Services Examination 2021' ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ Link ನ ಕೆಳಗಿರುವ Click Here ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಪಿಡಿಎಫ್ ಪುಟ ತೆರೆಯುತ್ತದೆ ಅದರಲ್ಲಿ ರೋಲ್ ನಂಬರ್ ಮತ್ತು ಅರ್ಹತೆ ಪಡೆದವರ ಹೆಸರುಗಳನ್ನು ಮುದ್ರಿಸಲಾಗಿರುತ್ತದೆ.
ಸ್ಟೆಪ್ 5: ಪಿಡಿಎಫ್ ನಲ್ಲಿ ನಿಮ್ಮ ಹೆಸರಿದೆಯೇ ಎಂದು ಪರಿಶೀಲಿಸಿಕೊಳ್ಳಿ ಮತ್ತು ಅದನ್ನು ಮುಂದಿನ ರೆಫರೆನ್ಸ್ ಗಾಗಿ ಡೌನ್‌ಲೋಡ್ ಮಾಡಿಕೊಳ್ಳಿ.
ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ.

ಅಭ್ಯರ್ಥಿಗಳು ನೇರವಾಗಿ ಫಲಿತಾಂಶವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
UPSC released Combined medical services examination 2021 results in upsc website. Here is how to download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+