
ಕೇಂದ್ರ ಲೋಕ ಸೇವಾ ಆಯೋಗವು 2020ರ ಸಾಲಿನ ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಇಂದು upsc.gov.in ವೆಬ್‌ಸೈಟ್ ನಲ್ಲಿ ಪ್ರಕಟ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ವೀಕ್ಷಿಸಬಹುದು.
ಇಂದು ಸಂಜೆ ಯುಪಿಎಸ್ಸಿ 2020ರ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶುಭಮ್ ಕುಮಾರ್ ಅವರು ಪ್ರಥಮ ರ್ಯಾಂಕ್ ಅನ್ನು ಪಡೆದಿದ್ದಾರೆ. ಜಾಗ್ರತಿ ಅವಸ್ತಿ ಮತ್ತು ಅಂಕಿತಾ ಜೈನ್ ಅವರು ಎರಡು ಮತ್ತು ಮೂರನೇ ಸ್ಥಾನವನ್ನು ಪಡೆದಿದ್ದಾರೆ.
ಯುಪಿಎಸ್ಸಿ ಒಟ್ಟು 761 ಅಭ್ಯರ್ಥಿಗಳನ್ನು ನೇಮಕಾತಿಗೆ ಶಿಫಾರಸ್ಸು ಮಾಡಲಾಗಿದೆ. ಈ ಪೈಕಿ 545 ಮಂದಿ ಪುರುಷರು ಹಾಗೂ 216 ಮಂದಿ ಮಹಿಳಾ ಅಭ್ಯರ್ಥಿಗಳಿದ್ದಾರೆ. ಟಾಪ್ 25ರಲ್ಲಿ 13 ಜನ ಪುರುಷರು ಹಾಗೂ 12 ಜನ ಮಹಿಳಾ ಅಭ್ಯರ್ಥಿಗಳಿದ್ದಾರೆ. ಈ ಬಾರಿ 25 ವಿಶೇಷ ಚೇತನ ಅಭ್ಯರ್ಥಿಗಳು ಯುಪಿಎಸ್ಸಿ ಪರೀಕ್ಷೆಯನ್ನು ಪಾಸ್ ಮಾಡಿದ್ದಾರೆ.
ಪ್ರಥಮ ರ್ಯಾಂಕ್ ಪಡೆದಿರುವ ಶುಭಮ್ ಅವರು ಐಐಟಿ ಮುಂಬೈನಲ್ಲಿ ಬಿ.ಟೆಕ್ ಪದವಿಯನ್ನು ಪಡೆದಿದ್ದಾರೆ. ಎರಡನೇ ಸ್ಥಾನ ಪಡೆದಿರುವ ಜಾಗೃತಿ ಅವರು ಭೂಪಾಲ್ ನಲ್ಲಿ ಎಂಎಎನ್‌ಐಟಿ ಯಲ್ಲಿ ಬಿಟೆಕ್ ಪದವಿ ಅನ್ನು ಮಾಡಿದ್ದಾರೆ.
ಯುಪಿಎಸ್ ಸಿ ಸಿವಿಲ್ ಸರ್ವೀಸ್ 2020: ಫಲಿತಾಂಶ ವೀಕ್ಷಿಸುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಯುಪಿಎಸ್ಸಿ ಅಧಿಕೃತ ವೆಬ್‌ಸೈಟ್ upsc.gov.in ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ "ನಾಗರಿಕ ಸೇವೆ ಮುಖ್ಯ ಪರೀಕ್ಷೆ ಅಂತಿಮ ಫಲಿತಾಂಶ -2020" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಪರೀಕ್ಷೆಯಲ್ಲಿ ಉತ್ತೀರ್ಣರಾದ ಹಾಗೂ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಸ್ಕ್ರೀನ್ ಮೇಲೆ ಮೂಡುವುದು
ಸ್ಟೆಪ್ 4: ಅಭ್ಯರ್ಥಿಗಳು ಫಲಿತಾಂಶದ ಲೀಸ್ಟ್ ಅನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬಹುದು.
ಕೇಂದ್ರ ಲೋಕಸೇವಾ ಆಯೋಗವು ಭಾರತೀಯ ಆಡಳಿತ ಸೇವೆ (ಐಎಎಸ್), ಭಾರತೀಯ ವಿದೇಶಿ ಸೇವೆ (ಐಎಫ್ಎಸ್) ಮತ್ತು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಮತ್ತು ಇತರ ಅಧಿಕಾರಿಗಳನ್ನು ಆಯ್ಕೆ ಮಾಡಲು ನಾಗರೀಕ ಸೇವಾ ಪರೀಕ್ಷೆಯನ್ನು ವಾರ್ಷಿಕವಾಗಿ ಪ್ರಿಲಿಮಿನರಿ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಹಂತಗಳಲ್ಲಿ ನಡೆಸಲಾಗುತ್ತದೆ.


Click it and Unblock the Notifications











