ಕೇಂದ್ರ ಲೋಕಸೇವಾ ಆಯೋಗವು ನಾಗರಿಕ ಸೇವಾ ಹುದ್ದೆಗಳ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಇದೀಗ ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಕೇಂದ್ರ ಲೋಕಸೇವಾ ಆಯೋಗ ವಿವಿಧ ಇಲಾಖೆಗಳ ಅಡಿಯಲ್ಲಿ ಒಟ್ಟು 712 ಹುದ್ದೆಗಳಿಗೆ ಮಾರ್ಚ್ 1,2021 ರಿಂದ ಮಾರ್ಚ್ 23,2021 ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಜೊತೆಗೆ ಕನಿಷ್ಟ 21 ರಿಂದ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಯುಪಿಎಸ್ಸಿ ನಾಗರಿಕ ಸೇವೆ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಈಗಾಗಲೇ ಪ್ರಿಲಿಮಿನರಿ ಪರೀಕ್ಷೆ ನಡೆದಿದ್ದು, ಫಲಿತಾಂಶವನ್ನು ಕೂಡ ಪ್ರಕಟಿಸಲಾಗಿದೆ. ಮುಖ್ಯ ಪರೀಕ್ಷೆಯನ್ನು ಜನವರಿ 7 ರಿಂದ 9ರವರೆಗೆ ಮತ್ತು 15 ಹಾಗೂ 16ನೇ ದಿನಾಂಕದಂದು ನಡೆಸಲಾಗಿತ್ತು. ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ಫಲಿತಾಂಶವನ್ನು ಇದೀಗ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಯುಪಿಎಸ್ಸಿ ಮುಖ್ಯ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ ? :
ಸ್ಟೆಪ್ 1: ಕೇಂದ್ರ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ನೀಡಲಾಗಿರುವ "Written Exam Result -UPSC Civil Services (Mains) Examination, 2021" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಪಿಡಿಎಫ್ ತೆರೆಯಲಿದೆ ಅಲ್ಲಿ ನಿಮ್ಮ ರೋಲ್ ನಂಬರ್ ಚೆಕ್ ಮಾಡಿಕೊಳ್ಳಿ
ಸ್ಟೆಪ್ 4: ನಿಮ್ಮ ಫಲಿತಾಂಶ ವೀಕ್ಷಿಸಿದ ಬಳಿಕ ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.
ಅಭ್ಯರ್ಥಿಗಳು ಯುಪಿಎಸ್ಸಿ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











