
ಕೇಂದ್ರ ಲೋಕಸೇವಾ ಆಯೋಗವು ಎನ್‌ಫೋರ್ಸ್‌ಮೆಂಟ್ ಆಫೀಸರ್/ಅಕೌಂಟ್ಸ್ ಆಫೀಸರ್ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಯುಪಿಎಸ್ಸಿ ಒಟ್ಟು 421 ಎನ್‌ಫೋರ್ಸ್‌ಮೆಂಟ್ ಆಫೀಸರ್/ಅಕೌಂಟ್ಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಅಲ್ಲದೇ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಲಿಖಿತ ಪರೀಕ್ಷೆಯು ಮೇ 9,2021ರಂದು ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಯುಪಿಎಸ್ಸಿ ಇಪಿಎಫ್ಓ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://upsc.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಎನ್‌ಫೋರ್ಸ್‌ಮೆಂಟ್ ಆಫೀಸರ್/ಅಕೌಂಟ್ಸ್ ಆಫೀಸರ್ ಹುದ್ದೆಗಳ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ಐಡಿ ಮತ್ತು ರೋಲ್ ನಂಬರ್ ನಮೂದಿಸಿ ಸಬ್‌ಮಿಟ್ ಮಾಡಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗದುಕೊಳ್ಳಿ


Click it and Unblock the Notifications











