UPSC ESE Exam 2020 Time Table: ಇಂಜಿನಿಯರಿಂಗ್ ಸರ್ವೀಸಸ್ ಪರೀಕ್ಷಾ ವೇಳಾಪಟ್ಟಿ ಮತ್ತು ಪ್ರವೇಶ ಪತ್ರ ರಿಲೀಸ್

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ) 2020ರ ಇಂಜಿನಿಯರಿಂಗ್ ಸರ್ವೀಸಸ್ (ಇಎಸ್‌ಇ) ಪ್ರಮುಖ ಪರೀಕ್ಷೆಯ ವೇಳಾಪಟ್ಟಿ ಮತ್ತು ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಯನ್ನು ಬರೆಯಲಿರುವ ಅಭ್ಯರ್ಥಿಗಳು ವೇಳಾಪಟ್ಟಿಯನ್ನು ವೀಕ್ಷಿಸಬಹುದು ಜೊತೆಗೆ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಯುಪಿಎಸ್‌ಸಿ ಇಂಜಿನಿಯರಿಂಗ್ ಸರ್ವೀಸಸ್ ಪರೀಕ್ಷೆಯ ಪ್ರವೇಶ ಪತ್ರ ಮತ್ತು ವೇಳಾಪಟ್ಟಿ ಪ್ರಕಟ

ಯುಪಿಎಸ್‌ಸಿ ಇಂಜಿನಿಯರಿಂಗ್ ಸರ್ವೀಸಸ್ 2020ರ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಪ್ರಮುಖ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿರುತ್ತದೆ. ಯುಪಿಎಸ್‌ಸಿ ಇಂಜಿನಿಯರಿಂಗ್ ಸರ್ವೀಸಸ್ ಹುದ್ದೆಗಳ ಪ್ರಮುಖ ಪರೀಕ್ಷೆಯು ಅಕ್ಟೋಬರ್ 18,2020 (ಭಾನುವಾರ) ರಂದು ನಡೆಯಲಿದೆ.

ಪರೀಕ್ಷೆಯನ್ನು ಎದುರಿಸಲಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಮತ್ತು ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಪ್ರಮುಖ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಮುಂದಿನ ಹಂತವಾದ ನೇರ ಸಂದರ್ಶನಕ್ಕೆ ಹಾಜರಾಗಬಹುದು.ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪಡೆಯಲು ಕೆಳಗೆ ನೀಡಲಾಗಿರುವ ಸ್ಟೆಪ್ಸ್ ಫಾಲೋ ಮಾಡಿ.

ಯುಪಿಎಸ್‌ಸಿ ಇಂಜಿನಿಯರಿಂಗ್ ಸರ್ವೀಸಸ್ ಪರೀಕ್ಷೆಯ ಪ್ರಮುಖ ಪರೀಕ್ಷಾ ಪ್ರವೇಶ ಪತ್ರ ಪಡೆಯಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ)ನ ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಹೋಗಿ

ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "e-Admit Card :Engineering Services (Main) Examination, 2020" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ Link ನ ಕೆಳಗಿರುವ Click Here ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಪಾಸ್‌ವರ್ಡ್‌ / ಜನ್ಮದಿನಾಂಕ ನೀಡಿ ಲಾಗಿನ್ ಆಗಿ

ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನ ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಿ

ಸ್ಟೆಪ್ 6:ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ಯುಪಿಎಸ್‌ಸಿ ಇಎಸ್‌ಇ ಪ್ರಮುಖ ಪರೀಕ್ಷಾ ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಪರೀಕ್ಷಾ ವೇಳಾಪಟ್ಟಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC released ESE main exam admit card and exam time table. Here is How to download admit card. read on.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+