ಕೇಂದ್ರ ಲೋಕಸೇವಾ ಆಯೋಗವು ಇಂಜಿನಿಯರಿಂಗ್ ಸರ್ವೀಸಸ್ ಪರೀಕ್ಷೆ 2021ರ ಅಂತಿಮ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಫಲಿತಾಂಶದ ಅನುಸಾರ ವಿವಿಧ ಇಂಜಿನಿಯರಿಂಗ್ ವಿಭಾಗಗಳಿಗೆ ಮೆರಿಟ್ ಪಟ್ಟಿಯಲ್ಲಿ 194 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಅದರಲ್ಲಿ 77 ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್ ವಿಭಾಗಕ್ಕೆ, 34 ಅಭ್ಯರ್ಥಿಗಳು ಮೆಕ್ಯಾನಿಕಲ್, 54 ಅಭ್ಯರ್ಥಿಗಳು ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗಕ್ಕೆ 29 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿರುತ್ತದೆ.
ಯುಪಿಎಸ್ಸಿ ಒಟ್ಟು 226 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಏಪ್ರಿಲ್ 7,2021 ರಿಂದ ಏಪ್ರಿಲ್ 27,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಪ್ರಿಲಿಮಿನರಿ ಪರೀಕ್ಷೆಯನ್ನು ಜುಲೈ 18,2021ರಂದು ನಡೆಸಲಾಗಿತ್ತು. ಫಲಿತಾಂಶ ಪ್ರಕಟವಾದ ಬಳಿಕ ಮುಖ್ಯ ಪರೀಕ್ಷೆಯನ್ನು ನಡೆಸಲಾಗಿರುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆಯನ್ನು ನವೆಂಬರ್ 21,2021ರಂದು ನಡೆಸಲಾಗಿರುತ್ತದೆ. ನಂತರ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನವನ್ನು ನಡೆಸಲಾಗಿದೆ. ಇದೀಗ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಪ್ರಕಟ ಮಾಡಲಾಗಿದ್ದು, ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಯುಪಿಎಸ್ಸಿ ಇಎಸ್ಇ ಪರೀಕ್ಷೆಯ ಅಂತಿಮ ಫಲಿತಾಂಶ ಚೆಕ್ ಮಾಡುವುದು ಹೇಗೆ? :
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Final Result : Engineering Service Examination,2021" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿಲ್ಲಿ ಅಲ್ಲಿ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.


Click it and Unblock the Notifications











