UPSC ESE Main Exam 2021 Date : ಯಪಿಎಸ್ಸಿ ಇಎಸ್‌ಇ ಮುಖ್ಯ ಪರೀಕ್ಷೆ ನ.21ಕ್ಕೆ ನಿಗದಿ

ಯುಪಿಎಸ್‌ಸಿ ಇಎಸ್‌ಇ ಮುಖ್ಯ ಪರೀಕ್ಷಾ ದಿನಾಂಕ ಪ್ರಕಟ

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ) 2021ರ ಇಂಜಿನಿಯರಿಂಗ್ ಸರ್ವೀಸಸ್ (ಇಎಸ್‌ಇ) ಪ್ರಮುಖ ಪರೀಕ್ಷೆಯ ದಿನಾಂಕವನ್ನು ಪ್ರಕಟ ಮಾಡಲಾಗಿದೆ. ಪ್ರಿಲಿಮಿನರಿ ಪರೀಕ್ಷೆ ಬರೆಯಲು ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ವೀಕ್ಷಿಸಬಹುದು.

 

ಯುಪಿಎಸ್‌ಸಿ ಇಂಜಿನಿಯರಿಂಗ್ ಸರ್ವೀಸಸ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯು ಜುಲೈ 18,2021ರಂದು ನಡೆಯಲಿದೆ. ಈ ಮುಂಚೆ ಪರೀಕ್ಷೆಯನ್ನು ಏಪ್ರಿಲ್ 27,2021ರಂದು ನಿಗದಿಪಡಿಸಲಾಗಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ಯುಪಿಎಸ್ಸಿ ಇಎಸ್‌ಇ ಮುಖ್ಯ ಪರೀಕ್ಷೆಯನ್ನು ನವೆಂಬರ್ 21,2021ರಂದು ನಿಗದಿ ಮಾಡಲಾಗಿದೆ.

ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹತೆ ಪಡೆಯಲಿದ್ದಾರೆ. ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದ್ದು, ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಯುಪಿಎಸ್‌ಸಿ ಇಎಸ್‌ಇ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರ ಪಡೆಯಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ)ನ ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "e-Admit Card :Engineering Services (Preliminary) Examination, 2021" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ Link ನ ಕೆಳಗಿರುವ Click Here ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಪಾಸ್‌ವರ್ಡ್‌ / ಜನ್ಮದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನ ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಿ
ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ.

 

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ಯುಪಿಎಸ್‌ಸಿ ಇಎಸ್‌ಇ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
UPSC released main exam 2021 date for Engineering services examination (ESE).
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X