UPSC ESE Mains Admit Card 2021 : ಇಎಸ್‌ಇ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ) 2021ರ ಇಂಜಿನಿಯರಿಂಗ್ ಸರ್ವೀಸಸ್ (ಇಎಸ್‌ಇ) ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಯನ್ನು ಬರೆಯಲಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಯುಪಿಎಸ್ಸಿ ಇಂಜಿನಿಯರಿಂಗ್ ಸರ್ವೀಸಸ್ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಯುಪಿಎಸ್‌ಸಿ ಇಂಜಿನಿಯರಿಂಗ್ ಸರ್ವೀಸಸ್ ಪರೀಕ್ಷೆ 2021ರ ಬಗ್ಗೆ ಏಪ್ರಿಲ್ 7,2021ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಒಟ್ಟು 215 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಏಪ್ರಿಲ್ 27,2021ರ ಸಂಜೆ 6 ಗಂಟೆಯೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಪ್ರಮುಖ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಪ್ರಿಲಿಮಿನರಿ ಪರೀಕ್ಷೆಯು ಜುಲೈ 18,2021ರಂದು ನಡೆಸಲಾಗಿದ್ದು, ಫಲಿತಾಂಶ ಕೂಡ ಪ್ರಕಟವಾಗಿದೆ. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಲು ಅಹರಾಗಿರುತ್ತಾರೆ. ಮುಖ್ಯ ಪರೀಕ್ಷೆಯು ನವೆಂಬರ್ 21,2021ರಂದು ನಡೆಯಲಿದೆ, ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಯುಪಿಎಸ್‌ಸಿ ಇಂಜಿನಿಯರಿಂಗ್ ಸರ್ವೀಸಸ್ ಹುದ್ದೆಗಳ ಮೈನ್ಸ್ ಪರೀಕ್ಷಾ ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1: ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "e-Admit Card :Engineering Services (Main) Examination, 2021" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ Link ನ ಕೆಳಗಿರುವ Click Here ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಪಾಸ್‌ವರ್ಡ್‌ / ಜನ್ಮದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನ ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಿ
ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ಯುಪಿಎಸ್‌ಸಿ ಇಎಸ್‌ಇ ಮುಖ್ಯ ಪರೀಕ್ಷಾ ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
UPSC released main exam admit card 2021 for ESE exam. Candidates who are attending the exam, they can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+