ಕೇಂದ್ರ ಲೋಕಾ ಸೇವಾ ಆಯೋಗವು ಇಂಜಿನಿಯರಿಂಗ್ ಸರ್ವೀಸಸ್ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ವೀಕ್ಷಿಸಬಹುದು.

ಯುಪಿಎಸ್ಸಿ ಒಟ್ಟು 226 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಏಪ್ರಿಲ್ 7,2021 ರಿಂದ ಏಪ್ರಿಲ್ 27,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಪ್ರಿಲಿಮಿನರಿ ಪರೀಕ್ಷೆಯನ್ನು ಜುಲೈ 18,2021ರಂದು ನಡೆಸಲಾಗಿತ್ತು. ಫಲಿತಾಂಶ ಪ್ರಕಟವಾದ ಬಳಿಕ ಮುಖ್ಯ ಪರೀಕ್ಷೆಯನ್ನು ನಡೆಸಲಾಗಿರುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆಯನ್ನು ನವೆಂಬರ್ 21,2021ರಂದು ನಡೆಸಲಾಗಿರುತ್ತದೆ. ಇದೀಗ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಯುಪಿಎಸ್ಸಿ ಇಎಸ್ಇ ಪರೀಕ್ಷೆಯ ಫಲಿತಾಂಶ ಚೆಕ್ ಮಾಡುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Written Result : Engineering Service Examination, 2021" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿಲ್ಲಿ ಅಲ್ಲಿ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.
ಯುಪಿಎಸ್ಸಿ ಇಎಸ್‌ಇ ಲಿಖಿತ ಪರೀಕ್ಷೆ 2021 ಫಲಿತಾಂಶದ ನಂತರ ಮುಂದೇನು?:
ಕೇಂದ್ರ ಲೋಕಸೇವಾ ಆಯೋಗ 2021ರ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್ upsconline.nic.in ಗೆ ಭೇಟಿ ನೀಡಿ ವಿವರವಾದ ಮಾಹಿತಿಯನ್ನು ಡಿಸೆಂಬರ್ 27, 2021 ರಿಂದ ಜನವರಿ 7, 2022ರೊಳಗೆ ಭರ್ತಿ ಮಾಡಬೇಕಿರುತ್ತದೆ.
DAF ಅನ್ನು ಭರ್ತಿ ಮಾಡುವ ಮತ್ತು ಆನ್‌ಲೈನ್‌ನಲ್ಲಿ ಆಯೋಗಕ್ಕೆ ಸಲ್ಲಿಸುವ ಕುರಿತು ಪ್ರಮುಖ ಸೂಚನೆಗಳನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದೆ. ಯುಪಿಎಸ್ಸಿ ಇಎಸ್ಇ ಮುಖ್ಯ ಫಲಿತಾಂಶ 2021 ರಲ್ಲಿ ಯಶಸ್ವಿಯಾಗಿ ಹೊರಹೊಮ್ಮಿದ ಅಭ್ಯರ್ಥಿಗಳು ಆನ್‌ಲೈನ್ DAF ಅನ್ನು ಭರ್ತಿ ಮಾಡುವ ಮೊದಲು ವೆಬ್‌ಸೈಟ್‌ನ ಸಂಬಂಧಿತ ಪುಟದಲ್ಲಿ ಮೊದಲು ನೋಂದಾಯಿಸಿಕೊಳ್ಳಬೇಕು ಮತ್ತು ಬೆಂಬಲವಾಗಿ ಸಂಬಂಧಿತ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡುವ ಜೊತೆಗೆ ಆನ್‌ಲೈನ್‌ನಲ್ಲಿ ಸಲ್ಲಿಸಬೇಕು.
ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











