UPSC ESE Prelims Admit Card 2022 : ಇಎಸ್‌ಇ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ) 2022ರ ಇಂಜಿನಿಯರಿಂಗ್ ಸರ್ವೀಸಸ್ (ಇಎಸ್‌ಇ) ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಯನ್ನು ಬರೆಯಲಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

 
ಯುಪಿಎಸ್ಸಿ ಇಂಜಿನಿಯರಿಂಗ್ ಸರ್ವೀಸಸ್ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಯುಪಿಎಸ್‌ಸಿ ಇಂಜಿನಿಯರಿಂಗ್ ಸರ್ವೀಸಸ್ ಪರೀಕ್ಷೆ 2021ರ ಬಗ್ಗೆ ಸೆಪ್ಟೆಂಬರ್ 22,2021ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಒಟ್ಟು 247 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅಕ್ಟೋಬರ್ 12,2021ರ ಸಂಜೆ 6 ಗಂಟೆಯೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಪ್ರಮುಖ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಪ್ರಿಲಿಮಿನರಿ ಪರೀಕ್ಷೆಯನ್ನು ಫೆಬ್ರವರಿ 20,2022ರಂದು ನಡೆಸಲು ನಿಗದಿಪಡಿಸಲಾಗಿದೆ. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಮತ್ತು ಸಂದರ್ಶನಕ್ಕೆ ಹಾಜರಾಗಲು ಅಹರಾಗಿರುತ್ತಾರೆ. ಇದೀಗ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟಿಸಲಾಗಿದ್ದು, ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಯುಪಿಎಸ್‌ಸಿ ಇಂಜಿನಿಯರಿಂಗ್ ಸರ್ವೀಸಸ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1: ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "e-Admit Card :Engineering Services (prelims) Examination, 2022" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ Link ನ ಕೆಳಗಿರುವ Click Here ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಪಾಸ್‌ವರ್ಡ್‌ / ಜನ್ಮದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನ ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಿ
ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ.

 

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ಯುಪಿಎಸ್‌ಸಿ ಇಎಸ್‌ಇ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
UPSC released prelims exam admit card 2022 for ESE exam. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X