UPSC IFS Mains Final Result 2022 : ಫಲಿತಾಂಶ ವೀಕ್ಷಿಸುವುದು ಹೇಗೆ ?

ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) 2021ರ ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಪ್ರಮುಖ ಪರೀಕ್ಷೆಯ ಅಂತಿಮ ಫಲಿತಾಂಶ ಜೊತೆಗೆ ಅಂಕಪಟ್ಟಿಯನ್ನು ಕೂಡ ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಯುಪಿಎಸ್ಸಿ ಐಎಫ್‌ಎಸ್ ಮುಖ್ಯ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ

ಯುಪಿಎಸ್‌ಸಿ ಭಾರತೀಯ ಅರಣ್ಯ ಸೇವೆ ಪರೀಕ್ಷೆ 2021ರ ಮೂಲಕ 110 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಮಾರ್ಚ್ 24,2021ರ ಸಂಜೆ 6 ಗಂಟೆಯೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಪ್ರಮುಖ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಪ್ರಿಲಿಮಿನರಿ ಪರೀಕ್ಷೆಯನ್ನು ಈಗಾಗಲೇ ನಡೆಸಲಾಗಿದ್ದು, ಫಲಿತಾಂಶವನ್ನು ಕೂಡ ಪ್ರಕಟಿಸಲಾಗಿದೆ. ಮುಖ್ಯ ಪರೀಕ್ಷೆಯನ್ನು ಫೆಬ್ರವರಿ 27 ರಿಂದ ಮಾರ್ಚ್ 6,2022ರ ವರೆಗೆ ನಡೆಸಲಾಗಿತ್ತು. ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಈಗಾಗಲೆ ಪ್ರಕಟ ಮಾಡಲಾಗಿದ್ದು, ಮುಖ್ಯ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಮುಖ್ಯ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಸಂದರ್ಶನ ಸುತ್ತಿಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಎಂದು ತಿಳಿಯಲು ಮುಂದೆ ನೋಡಿ.

ಯುಪಿಎಸ್ಸಿ ಐಎಫ್‌ಎಸ್ ಮುಖ್ಯ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ

ಯುಪಿಎಸ್‌ಸಿ ಐಎಫ್‌ಎಸ್ ಮುಖ್ಯ ಪರೀಕ್ಷೆಯ ಅಂತಿಮ ಫಲಿತಾಂಶ ಪಡೆಯುವ ವಿಧಾನ :

ಸ್ಟೆಪ್ 1: ಯುಪಿಎಸ್‌ಸಿ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ " IFS (main) examination 2022 Final Result" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆಹೋಗುವಿರಿ ಅಲ್ಲಿ ನೀಡಲಾಗಿರುವ ಪಿಡಿಎಫ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ಸ್ಕ್ರೀನ್ ಮೇಲೆ ಲಭ್ಯವಾಗುವ ಫಲಿತಾಂಶವನ್ನು ಚೆಕ್ ಮಾಡಬಹುದು.

ಯುಪಿಎಸ್‌ಸಿ :

ಭಾರತೀಯ ಆಡಳಿತಾತ್ಮಕ ಸೇವೆ (ಐಎಎಸ್‌ (IAS) ) ಎಂಬುದು ಭಾರತ ಗಣರಾಜ್ಯ ಸರ್ಕಾರದ ಕಾರ್ಯಕಾರಿ ವಿಭಾಗದ ಆಡಳಿತಾತ್ಮಕ ನಾಗರಿಕ ಸೇವೆಯಾಗಿದೆ. ದೇಶಾದ್ಯಂತ ಐಎಎಸ್‌ ಅಧಿಕಾರಿಗಳು ನಿರ್ಣಾಯಕ ಹುದ್ದೆಗಳಲ್ಲಿರುವ ಮೂಲಕ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಅಧಿಕಾರಶಾಹಿಗಳನ್ನು ನಿರ್ವಹಿಸುವಲ್ಲಿ ಈ ಅಧಿಕಾರಿಗಳು ಪ್ರಮುಖ ಪಾತ್ರವಹಿಸುತ್ತಾರೆ. ಮೂರು ಅಖಿಲ ಭಾರತ ಸೇವೆಗಳಲ್ಲಿ ಇದೂ ಒಂದು.

ಕೇಂದ್ರೀಯ ಲೋಕ ಸೇವಾ ಆಯೋಗವು (ಯುಪಿಎಸ್ಸಿ) ಈ ನಾಗರಿಕ ಸೇವಾ ಪರೀಕ್ಷೆ ನಡೆಸುತ್ತದೆ. ಇದರಲ್ಲಿ ಮೂರು ಹಂತಗಳಿವೆ: ಪ್ರಾಥಮಿಕ ಪರೀಕ್ಷೆ, ಪ್ರಧಾನ ಪರೀಕ್ಷೆ ಹಾಗೂ ಸಂದರ್ಶನವಿದೆ. ಇವು ಬಹಳಷ್ಟು ಸ್ಪರ್ಧಾತ್ಮಕತೆಯುಳ್ಳವು ಎಂದು ಹೆಸರಾಗಿವೆ. ಇತ್ತೀಚೆಗೆ, ಪ್ರಾಥಮಿಕ ಪರೀಕ್ಷೆಯ ರೂಪರೇಖೆಯನ್ನು ಬದಲಾಯಿಸಲಾಗಿದೆ. ಸುಮಾರು 23 ಐಚ್ಛಿಕ ವಿಷಯಗಳಿದ್ದವು, ಜೊತೆಗೆ, ಸಾಮಾನ್ಯ ಅಧ್ಯಯನ ಪತ್ರಿಕೆಯೂ ಇತ್ತು. ಈಗ ಪ್ರಾಥಮಿಕ ಪರೀಕ್ಷೆಯಲ್ಲಿ ಯಾವುದೇ ಐಚ್ಛಿಕ ವಿಷಯಗಳಿರುವುದಿಲ್ಲ. ಬದಲಿಗೆ, ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಬರೆಯಲೇಬೇಕಾದ ಎರಡನೆಯ ಪರೀಕ್ಷೆಯುಂಟು. ಈ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಆಡಳಿತಾತ್ಮಕ ಕುಶಲತೆಯನ್ನು ಪರೀಕ್ಷಿಸುತ್ತದೆ. ಆದ್ದರಿಂದ ಈ ಪರೀಕ್ಷೆಗೆ ನಾಗರಿಕ ಸೇವಾ ಕುಶಲತಾ ಪರೀಕ್ಷೆ ಎನ್ನಲಾಗಿದೆ. ಸಿವಿಲ್ ಸರ್ವಿಸ್ ಆಪ್ಟಿಟ್ಯುಡ್ ಟೆಸ್ಟ್ [CSAT]ಎನ್ನುತ್ತಾರೆ. ಕುಶಲತೆ, ಸಾಮಾನ್ಯ ಗಣಿತ, ಸಮಗ್ರ ಇಂಗ್ಲಿಷ್‌ ಭಾಷೆ ಇತ್ಯಾದಿ ಸೇರಿದಂತೆ, ಇದರಲ್ಲಿ ಹಲವು ವಿಭಾಗಗಳಿವೆ.

ಹೆಚ್ಚಿನ ಮಾಹಿತಿಗಾಗಿ https://www.upsc.gov.in/ ಗಮನಿಸಿ. ಅಭ್ಯರ್ಥಿಗಳು ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
UPSC released main examination final result 2022 for indian forest service exam.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X