UPSC IFS Mains Admit Card 2022 : ಭಾರತೀಯ ಅರಣ್ಯ ಸೇವೆ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) 2022ರ ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಯನ್ನು ಬರೆಯಲಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಯುಪಿಎಸ್ಸಿ ಐಎಫ್‌ಎಸ್ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಯುಪಿಎಸ್‌ಸಿ ಭಾರತೀಯ ಅರಣ್ಯ ಸೇವೆ ಪರೀಕ್ಷೆ 2022ರ ಮೂಲಕ 151 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಫೆಬ್ರವರಿ 2,2022 ರಿಂದ ಫೆಬ್ರವರಿ 22,2022ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಈ ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಮತ್ತು ಕನಿಷ್ಟ 21 ರಿಂದ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ಯುಪಿಎಸ್ಸಿ ನೇಮಕಾತಿಯ ಭಾರತೀಯ ಅರಣ್ಯ ಸೇವೆ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಪ್ರಮುಖ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಪ್ರಿಲಿಮಿನರಿ ಪರೀಕ್ಷೆಯನ್ನು ಜೂನ್ 5,2022ರಂದು ನಡೆಸಲಾಗಿದ್ದು, ಪರೀಕ್ಷಾ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಮತ್ತು ಸಂದರ್ಶನಕ್ಕೆ ಹಾಜರಾಗಲು ಅಹರಾಗಿರುತ್ತಾರೆ. ಮುಖ್ಯ ಪರೀಕ್ಷೆಯನ್ನು ನವೆಂಬರ್ ತಿಂಗಳಲ್ಲಿ ನಿಗದಿಪಡಿಸಲಾಗಿದೆ. ಇದೀಗ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟಿಸಲಾಗಿದ್ದು, ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಯುಪಿಎಸ್‌ಸಿ ಭಾರತೀಯ ಅರಣ್ಯ ಸೇವೆ ಹುದ್ದೆಗಳ ಮುಖ್ಯ ಪರೀಕ್ಷಾ ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1: ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "e-Admit Card : Indian Forest Services (Mains) Examination, 2022" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ Link ನ ಕೆಳಗಿರುವ Click Here ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಪಾಸ್‌ವರ್ಡ್‌ / ಜನ್ಮದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನ ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಿ
ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ಯುಪಿಎಸ್‌ಸಿ ಐಎಫ್‌ಎಸ್ ಮುಖ್ಯ ಪರೀಕ್ಷಾ ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
UPSC released main examination admit card 2022 for indian forest service exam.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X