UPSC Civil Service Mains Admit Card 2022 : ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ನಾಗರಿಕ ಸೇವೆ ಹುದ್ದೆಗಳ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಇದೀಗ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಯುಪಿಎಸ್‌ಸಿ ನಾಗರಿಕ ಸೇವೆ ಹುದ್ದೆಗಳ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಕೇಂದ್ರ ಲೋಕಸೇವಾ ಆಯೋಗವು 816 ನಾಗರಿಕ ಸೇವೆ ಹುದ್ದೆಗಳಿಗೆ ಫೆಬ್ರವರಿ 2 ರಿಂದ ಫೆಬ್ರವರಿ 22,2022ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಕನಿಷ್ಟ 21 ರಿಂದ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಯುಪಿಎಸ್ಸಿ ನೇಮಕಾತಿಯ ನಾಗರಿಕ ಸೇವೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪ್ರಿಲಿಮಿನರಿ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರಿಲಿಮಿನರಿ ಪರೀಕ್ಷೆಯನ್ನು ಜೂನ್ 5,2022ರಂದು ನಿಗದಿಪಡಿಸಲಾಗಿತ್ತು. ಫಲಿತಾಂಶವನ್ನು ಈಗಾಗಲೇ ಪ್ರಕಟ ಮಾಡಲಾಗಿದೆ. ಇದೀಗ ಪ್ರಮುಖ ಪರೀಕ್ಷೆಯನ್ನು ಸೆಪ್ಟೆಂಬರ್ 16, 18, 24 ಮತ್ತು 25,2022ರಂದು ನಿಗದಿಪಡಿಸಲಾಗಿದ್ದು, ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.

ಯುಪಿಎಸ್‌ಸಿ ನಾಗರಿಕ ಸೇವೆ ಹುದ್ದೆಗಳ ಪ್ರಮುಖ ಪರೀಕ್ಷಾ ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1: ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಭೇಟಿ ನೀಡಿ

ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "e-Admit Card : Civil Services (mains) Examination, 2022" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ Link ನ ಕೆಳಗಿರುವ Click Here ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಪಾಸ್‌ವರ್ಡ್‌ / ಜನ್ಮದಿನಾಂಕ ನೀಡಿ ಲಾಗಿನ್ ಆಗಿ

ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನ ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಿ

ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC mains admit card 2022 released for civil service exam in official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+