UPSC NDA And NA (I) Admit Card 2022 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಇಲ್ಲಿ ತಿಳಿಯಿರಿ

ಕೇಂದ್ರ ಲೋಕ ಸೇವಾ ಆಯೋಗ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಪರೀಕ್ಷೆ (I) ಯ ಪ್ರವೇಶ ಪತ್ರವನ್ನು ರಿಲೀಸ್ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಯುಪಿಎಸ್‌ಸಿ ಎನ್‌ಡಿಎ ಮತ್ತು ಎನ್‌ಎ (I) ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಯುಪಿಎಸ್‌ಸಿ ಒಟ್ಟು 400 ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ (I) ಹುದ್ದೆಗಳ ನೇಮಕಾತಿಗಾಗಿ ಜನವರಿ 11,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹುದ್ದೆಗಳಿಗೆ ದ್ವಿತೀಯ ಪಿಯುಸಿ / 10+2 ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಮತ್ತು ನೌಕಾ ಅಕಾಡೆಮಿ ಹುದ್ದೆಗಳಿಗೆ ದ್ವಿತೀಯ ಪಿಯುಸಿ /10+2 ನಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯವನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಬೋರ್ಡ್‌ನಲ್ಲಿ ಅಧ್ಯಯನ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಿವಾಹಿತ ಪುರುಷ ಅಭ್ಯರ್ಥಿಗಳು ಜುಲೈ 2,2003ರ ಮುಂಚೆ ಮತ್ತು ಜುಲೈ 1,2006ರ ನಂತರ ಜನಿಸಿರಬಾರದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು.

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಯನ್ನು ಏಪ್ರಿಲ್ 10,2022ರಂದು ನಿಗದಿಪಡಿಸಲಾಗಿದ್ದು, ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಯುಪಿಎಸ್‌ಸಿ ಎನ್‌ಡಿಎ ಮತ್ತು ಎನ್‌ಎ I ಪರೀಕ್ಷೆಯ ಪ್ರವೇಶ ಪತ್ರವನ್ನು ಪಡೆಯಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "e-Admit Card : National Defence Academy & Naval Academy Examination (I), 2022" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ Link ನ ಕೆಳಗಿರುವ Click Here ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಅಥವಾ ರೋಲ್ ನಂಬರ್ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನ ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಿ
ಸ್ಟೆಪ್ 6:ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
UPSC NDA and NA (I) admit card 2022 released in official website. How to download read on.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X