ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ರಾಷ್ಟ್ರೀಯ ಭದ್ರತಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿಯ (ಎನ್‌ಡಿಎ ಮತ್ತು ಎನ್‌ಎ (I)) ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ವೀಕ್ಷಿಸಬಹುದು.

ಕೇಂದ್ರ ಲೋಕಸೇವಾ ಆಯೋಗವು 400 ರಾಷ್ಟ್ರೀಯ ಭದ್ರತಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಹುದ್ದೆಗಳನ್ನು ಭರ್ತಿ ಮಾಡಲು
ಜನವರಿ 19,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು ಮತ್ತು ಅರ್ಜಿ ಶುಲ್ಕ ಪಾವತಿಸಲು ಜನವರಿ 18,2021 ಕೊನೆಯ ದಿನವಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಲಿಖಿತ ಪರೀಕ್ಷೆಯನ್ನು ಏಪ್ರಿಲ್ 18,2021ರಂದು ನಡೆಲಾಗಿತ್ತು. ಪರೀಕ್ಷೆಯ ಫಲಿತಾಂಶವನ್ನು ಜೂನ್ ನಲ್ಲಿ ಪ್ರಕಟಿಸಲಾಗಿರುತ್ತದೆ, ತದನಂತರ ಜುಲೈ ಮತ್ತು ಸೆಪ್ಟೆಂಬರ್ ನಲ್ಲಿ ಸಂದರ್ಶನವನ್ನು ನಡೆಸಲಾಗಿದೆ. ಈ ನೇಮಕಾತಿಯ ಅಂತಿಮ ಫಲಿತಾಂಶವನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೆರಿಟ್ ಆಧಾರದ ಮೇಲೆ ಪ್ರಕಟಿಸಲಾಗಿದೆ. ಒಟ್ಟು 517 ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗಿದೆ. ಅಭ್ಯರ್ಥಿಗಳು ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಯುಪಿಎಸ್ಸಿ ಎನ್‌ಡಿಎ ಮತ್ತು ಎನ್‌ಎ (I) ಅಂತಿಮ ಫಲಿತಾಂಶ ವೀಕ್ಷಿಸುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಯುಪಿಸ್ಸಿ ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ Final Result Of NDA And NA Examination (I), 2021 ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಪಿಡಿಎಫ್ ತೆರೆಯಲಿದೆ
ಸ್ಟೆಪ್ 5: ಅಭ್ಯರ್ಥಿಗಳು ನಿಮ್ಮ ಫಲಿತಾಂಶವನ್ನು ವೀಕ್ಷಿಸಿಕೊಳ್ಳಿ ಮತ್ತು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಅಭ್ಯರ್ಥಿಗಳು ನೇರವಾಗಿ ಫಲಿತಾಂಶವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











