
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ರಾಷ್ಟ್ರೀಯ ಭದ್ರತಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ (ಎನ್‌ಡಿಎ ಮತ್ತು ಎನ್‌ಎ (II)) ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಆಯೋಗವು ಒಟ್ಟು 400 ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ ೮,2021ರೊಳಗೆ ಅರ್ಜಿಯನ್ನು ಆಹ್ವಾನಿಸಿತ್ತು. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಪರೀಕ್ಷೆಯು ನವೆಂಬರ್ 14,2021ರಂದು ಭಾರತದೆಲ್ಲೆಡೆ ನಡೆಯಲಿದ್ದು, ಇದೀಗ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಯುಪಿಎಸ್ಸಿ ಎನ್‌ಡಿಎ ಮತ್ತು ಎನ್‌ಎ (II) ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ?
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಯುಪಿಸ್ಸಿ ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ಐಡಿ ಮತ್ತು ರೋಲ್ ನಂಬರ್ ನಮೂದಿಸಿ
ಸ್ಟೆಪ್ 5: ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.


Click it and Unblock the Notifications











