
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ರಾಷ್ಟ್ರೀಯ ಭದ್ರತಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿಯ (ಎನ್‌ಡಿಎ ಮತ್ತು ಎನ್‌ಎ (I)) ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಇದೀಗ ತಮ್ಮ ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸಬಹುದು.
ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಮತ್ತು ನೌಕಾ ಅಕಾಡೆಮಿ (ಎನ್‌ಎ) (I) ಪರೀಕ್ಷೆಗಳು ಏಪ್ರಿಲ್ 18,2021ರಂದು ನಡೆದಿದ್ದವು. ಪರೀಕ್ಷೆ ಬರೆದ ಅಭ್ಯರ್ಥಿಗಳು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಅದಿಕೃತ ವೆಬ್‌ಸೈಟ್ https://upsc.gov.in/ ಗೆ ಭೇಟಿ ನೀಡಿ ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ.
ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ Written Exam Result-NDA Examination (I),2021 ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ Docutments ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಫಲಿತಾಂಶ ಲಭ್ಯವಿರುತ್ತದೆ ಚೆಕ್ ಮಾಡಿಕೊಳ್ಳಿ
ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











