ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ರಾಷ್ಟ್ರೀಯ ಭದ್ರತಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿಯ (ಎನ್‌ಡಿಎ ಮತ್ತು ಎನ್‌ಎ (II)) ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಇದೀಗ ತಮ್ಮ ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸಬಹುದು.

ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಮತ್ತು ನೌಕಾ ಅಕಾಡೆಮಿ(ಎನ್‌ಎ) ಪರೀಕ್ಷೆಗಳು ನವೆಂಬರ್ 17ರಂದು ನಡೆದಿದ್ದವು. ಪರೀಕ್ಷೆ ಬರೆದ ಅಭ್ಯರ್ಥಿಗಳು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಅದಿಕೃತ ವೆಬ್‌ಸೈಟ್ https://upsc.gov.in/ ಗೆ ಭೇಟಿ ನೀಡಿ ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ.
ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಮುಂದಿನ ಹಂತವಾದ ಸಂದರ್ಶನಕ್ಕೆ ಆಯ್ಕೆಯಾಗುತ್ತಾರೆ. ಸರ್ವಿಸ್ ಸೆಲೆಕ್ಷನ್ ಬೋರ್ಡ್ ಈ ಸಂದರ್ಶನವನ್ನು ನಡೆಸಲಿದ್ದು, ಎಸ್‌ಎಸ್‌ಬಿ ಸಂದರ್ಶನದ ವೇಳೆ ಅಭ್ಯರ್ಥಿಗಳು ವಯಸ್ಸು ಮತ್ತು ಶಿಕ್ಷಣ ಅರ್ಹತೆಗಳಿಗೆ ಸಂಬಂಧಿಸಿದ ಮೂಲ ದಾಖಲಾತಿಗಳನ್ನು ಒದಗಿಸಬೇಕಿರುತ್ತದೆ. ಈ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ.


Click it and Unblock the Notifications











