ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ರಾಷ್ಟ್ರೀಯ ಭದ್ರತಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿಯ (ಎನ್‌ಡಿಎ ಮತ್ತು ಎನ್‌ಎ (II)) ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಇದೀಗ ತಮ್ಮ ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸಬಹುದು.

ಕೇಂದ್ರ ಲೋಕ ಸೇವಾ ಆಯೋಗ 400 ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಜನವರಿ 11,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹುದ್ದೆಗಳಿಗೆ ದ್ವಿತೀಯ ಪಿಯುಸಿ / 10+2 ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಮತ್ತು ನೌಕಾ ಅಕಾಡೆಮಿ ಹುದ್ದೆಗಳಿಗೆ ದ್ವಿತೀಯ ಪಿಯುಸಿ /10+2 ನಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯವನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಬೋರ್ಡ್‌ನಲ್ಲಿ ಅಧ್ಯಯನ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಹುದ್ದೆಗಳಿಗೆ ಜುಲೈ 2,2003ರ ಮುಂಚೆ ಮತ್ತು ಜುಲೈ 1,2006ರ ನಂತರ ಜನಿಸಿರದ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.
ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಈಗಾಗಲೇ ಎನ್‌ಡಿಎ ಮತ್ತು ಎನ್‌ಎ I ಪರೀಕ್ಷಾ ಫಲಿತಾಂಶವನ್ನು ಪ್ರಕಟ ಮಾಡಲಾಗಿತ್ತು. ಇದೀಗ ಎನ್‌ಡಿಎ ಎನ್ಎ II ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಮತ್ತು ನೌಕಾ ಅಕಾಡೆಮಿ (ಎನ್‌ಎ) (II) ಪರೀಕ್ಷೆಗಳು ಸೆಪ್ಟೆಂಬರ್ 4,2022ರಂದು ನಡೆದಿದ್ದವು. ಪರೀಕ್ಷೆ ಬರೆದ ಅಭ್ಯರ್ಥಿಗಳು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಅದಿಕೃತ ವೆಬ್‌ಸೈಟ್ https://upsc.gov.in/ ಗೆ ಭೇಟಿ ನೀಡಿ ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ. ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ಇಲ್ಲಿ ತಿಳಿಯಿರಿ.
ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ Written Exam Result-NDA Examination (II),2022 ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಲಭ್ಯವಿರುವ ಪಿಡಿಎಫ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಈಗ ನಿಮ್ಮ ರೋಲ್ ನಂಬರ್ ಮೂಲಕ ಫಲಿತಾಂಶವನ್ನು ಪರಿಶೀಲಿಸಿಕೊಳ್ಳಿ
ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











