ಪ್ರತಿಭಾವಂತ ಭಾರತೀಯ ವಿದ್ಯಾರ್ಥಿಗಳಿಗೆ ಅಮೆರಿಕದಿಂದ ಅಹ್ವಾನ

Posted By:

ಕಳದೆ ತಿಂಗಳಷ್ಟೇ ಅಮೆರಿಕ ವಿವಿಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಪ್ರವೇಶಾತಿ ಕುಗ್ಗುತ್ತಿದೆ ಎನ್ನುವ ಸುದ್ದಿಯನ್ನು ಸ್ವತಃ ಅಮೆರಿಕ ಹೊರ ಹಾಕಿತ್ತು. ಆದರೆ ಈಗ ಭಾರತೀಯ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು 'You Are Welcome Here' ಎಂದು ಕೈಬೀಸಿ ಕರೆಯುತ್ತಿದೆ. [ಅಮೆರಿಕ ವಿಶ್ವವಿದ್ಯಾಲಯಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖ]

ಅಮೆರಿಕಾದ ರಾಯಭಾರ ಕಚೇರಿಯ ಅಧಿಕಾರಿ ಮೇರಿ ಕೇ ಲಾಸ್ ಕಾರ್ಲ್ಸ್​ಸನ್ ಭಾರತೀಯ ವಿದ್ಯಾರ್ಥಿಗಳಿಗಾಗಿ ಪತ್ರವೊಂದನ್ನು ಬರೆದಿದ್ದಾರೆ. ಆ ಪತ್ರದಲ್ಲಿ ಪ್ರತಿಭಾವಂತ ಭಾರತೀಯ ವಿದ್ಯಾರ್ಥಿಗಳಿಗೆ ಅಮೆರಿಕದಲ್ಲಿ ಸಾಕಷ್ಟು ಅವಕಾಶಗಳು ಇವೆ ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಅಮೆರಿಕದಿಂದ ಅಹ್ವಾನ

ಮೇರಿ ಕೇ ಲಾಸ್ ಕಾರ್ಲ್ಸ್​ಸನ್ ಪತ್ರ

"ಅಮೆರಿಕದ ಶಿಕ್ಷಣ ಸಂಸ್ಥೆಗಳಲ್ಲಿ 10 ಲಕ್ಷಕ್ಕೂ ಅಧಿಕ ವಿದೇಶಿ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಪಡೆಯುತ್ತಿದ್ದು, ಇದರಲ್ಲಿ ಭಾರತೀಯ ವಿದ್ಯಾರ್ಥಿಗಳ ಪ್ರಮಾಣ 1.66 ಲಕ್ಷದಷ್ಟಿದೆ. ಕಳೆದೆರಡು ವರ್ಷಗಳಿಂದ ಉನ್ನತ ವಿದ್ಯಾಭ್ಯಾಸಕ್ಕಾಗಿ ಅಮೆರಿಕಕ್ಕೆ ತೆರಳುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ವರ್ಷವೂ ಅಮೆರಿಕದ 4,500 ಪ್ರಮಾಣೀಕೃತ ಶೈಕ್ಷಣಿಕ ಸಂಸ್ಥೆಗಳಿಂದ ಉನ್ನತ ವ್ಯಾಸಂಗಕ್ಕೆ ದಾಖಲಾಗುವಂತೆ ಭಾರತೀಯ ವಿದ್ಯಾರ್ಥಿಗಳಿಗೆ ಆಹ್ವಾನ ಕಳುಹಿಸಲಾಗಿದ್ದು, ಅವರಿಗೆಲ್ಲಾ ಅಭಿನಂದನೆಗಳು.ಅಮೆರಿಕ ವಿಶ್ವವಿದ್ಯಾಲಯಗಳಲ್ಲಿ ಓದಿ ಪದವಿ ಪಡೆದವರೆಲ್ಲ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಉಭಯ ದೇಶಗಳ ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾಲಯಗಳ ನಡುವಣ ಸಹಭಾಗಿತ್ವಕ್ಕೆ ಒತ್ತಾಸೆ ನೀಡುವುದು ಅಮೆರಿಕದ ರಾಯಭಾರ ಕಚೇರಿಯ ಪ್ರಮುಖ ಆದ್ಯತೆಯಾಗಿದ್ದು, ಪ್ರತಿಭಾವಂತ ಭಾರತೀಯ ವಿದ್ಯಾರ್ಥಿಗಳನ್ನು ಸ್ವಾಗತಿಸಲು ನಾವು ಎದುರು ನೋಡುತ್ತಿದ್ದೇವೆ.

ಅಮೆರಿಕದಲ್ಲಿ ಓದುವ ಬಗ್ಗೆ ಚಿಂತನೆ ನಡೆಸುತ್ತಿದ್ದರೆ, ಕೂಲಂಕಷವಾದ ಪರಿಶೀಲನೆ ಅಗತ್ಯವಾಗಿದೆ. ತುಲನೆ ಮಾಡಿ ಅತ್ಯುತ್ತಮವಾದುದನ್ನು ಆಯ್ದುಕೊಳ್ಳಬೇಕು. ಎಜ್ಯುಕೇಶನ್​ಯುುಎಸ್​ಎ (educationusa.state.gov)ಗೆ ಭೇಟಿ ನೀಡಿ ಶೈಕ್ಷಣಿಕ ಸಂಸ್ಥೆಗಳು, ಲಭ್ಯವಿರುವ ಕೋರ್ಸ್​ಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಭಾರತದಲ್ಲಿ ಏಳು ಎಜ್ಯುಕೇಶನ್ ಯುಎಸ್​ಎ ಸಲಹಾ ಕೇಂದ್ರಗಳಿದ್ದು, ಇವುಗಳಿಂದಲೂ ನಿಖರ ಮತ್ತು ಸಮಗ್ರ ಮಾಹಿತಿ ಸಿಗುತ್ತವೆ. ಈ ಬಾರಿ ಎಜ್ಯುಕೇಷನ್​ಯುುಎಸ್​ಎ ಭಾರತದ 7 ನಗರಗಳು ಮತ್ತು ಸಲಹಾಕೇಂದ್ರಗಳಿಗೆ ಭೇಟಿ ನೀಡಲಿದೆ. ಅಮೆರಿಕದ ಶಿಕ್ಷಣ ಸಂಸ್ಥೆಗಳು ವೈವಿಧ್ಯತೆಗೆ ಆದ್ಯತೆ ನೀಡುತ್ತಿದ್ದು, ವಿಭಿನ್ನ ಹಿನ್ನೆಲೆಯ ವಿದ್ಯಾರ್ಥಿಗಳನ್ನು ಬೆಂಬಲಿಸುತ್ತದೆ. ವಿದ್ಯಾರ್ಥಿಗಳು ಹೊತ್ತುತರುವ ವಿಶಿಷ್ಟ ಮತ್ತು ವೈವಿಧ್ಯಮಯ ದೃಷ್ಟಿಕೋನಗಳನ್ನು ಅಮೆರಿಕದ ವಿಶ್ವವಿದ್ಯಾಲಯಗಳು ಮತ್ತು ಶೈಕ್ಷಣಿಕ ಸಂಸ್ಥೆಗಳು ಗೌರವಿಸುತ್ತವೆ. ಸದ್ಯದ ಅಂಕಿಅಂಶಗಳಂತೆ ಅಮೆರಿಕಕ್ಕೆ ಉನ್ನತ ವ್ಯಾಸಂಗ ಪಡೆದುಕೊಳ್ಳಲು ಬರುವ ಪ್ರತಿ ಆರು ವಿದೇಶಿ ವಿದ್ಯಾರ್ಥಿಗಳಲ್ಲಿ ಓರ್ವ ಭಾರತೀಯನಿರುತ್ತಾನೆ. ಇವರು ಶೈಕ್ಷಣಿಕವಾಗಿ ಉತ್ತಮ ಸಾಧನೆ ತೋರಿದ್ದು, ವಿಶ್ವವಿದ್ಯಾಲಯ ಮತ್ತು ತಮ್ಮ ಸುತ್ತಮುತ್ತಲಿನ ಸಮುದಾಯಕ್ಕೆ ಅಪಾರ ಕೊಡುಗೆ ನೀಡುತ್ತಿದ್ದಾರೆ. ಅಮೆರಿಕಕ್ಕೆ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕಲ್ಯಾಣ ಪ್ರಮುಖ ಆದ್ಯತೆಯಾಗಿದ್ದು, ಇದಕ್ಕಾಗಿಯೇ ನೂತನ ಆಂದೋಲನ You Are Welcome Here ಅಮೆರಿಕದ ವಿವಿಗಳು ನಡೆಸುತ್ತಿವೆ. ಇಲ್ಲಿನ ವಿವಿಗಳ ಕ್ಯಾಂಪಸ್ಸಿನ ಗುಣಮಟ್ಟ ಉತ್ತಮವಾಗಿದ್ದು, ಈ ಹಿಂದೆ ಇಲ್ಲಿ ವಿದ್ಯಾಭ್ಯಾಸ ಪಡೆದುಕೊಂಡಿರುವ ಭಾರತೀಯ ವಿದ್ಯಾರ್ಥಿಗಳು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಳೆದ ನವೆಂಬರ್​ನಲ್ಲಿ ಅಂತಾರಾಷ್ಟ್ರೀಯ ಶಿಕ್ಷಣ ಸಪ್ತಾಹದ ಅಂಗವಾಗಿ ಅಮೆರಿಕ ರಾಯಭಾರ ಕಚೇರಿ ಸರಣಿ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಭಾರತೀಯ ವಿದ್ಯಾರ್ಥಿಗಳು ತಮ್ಮ ಅನುಭವ ಹಂಚಿಕೊಂಡಿದ್ದಾರೆ. ನಿಮ್ಮ ಬದುಕು ಮತ್ತು ವೃತ್ತಿಜೀವನದ ಗುರಿಗಳನ್ನು ತಲುಪಲು ನೆರವಾಗುವ ನಿಟ್ಟಿನಲ್ಲಿ ಮೌಲ್ಯಯುತ ಶೈಕ್ಷಣಿಕ ಅವಕಾಶಗಳನ್ನು ಒದಗಿಸುವ ನಮ್ಮ ಕಾಲೇಜುಗಳು ನಿಮ್ಮ ಸ್ವಾಗತಕ್ಕೆ ಸಜ್ಜಾಗಿವೆ. ಅವರೊಂದಿಗೆ ನಾನೂ ದನಿ ಗೂಡಿಸುತ್ತಿರುವೆ ಅಮೆರಿಕಕ್ಕೆ ನಿಮಗಿದೋ ಸ್ವಾಗತ."

-ಮೇರಿ ಕೇ ಲಾಸ್ ಕಾರ್ಲ್ಸ್​ಸನ್, ನವದೆಹಲಿಯ ಅಮೆರಿಕ ರಾಯಭಾರ ಕಚೇರಿ ಅಧಿಕಾರಿ(ಶಾರ್ಜೆ ಡಿ ಅಫೇರ್ಸ್)

English summary
Many US universities have come together to send a specific message to students through the YouAreWelcomeHere campaign.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia