ಉತ್ತರಾಖಂಡ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಯುಬಿಎಸ್ಇ) 10 ಮತ್ತು 12ನೇ ತರಗತಿ ಫಲಿತಾಂಶವನ್ನು ಇಂದು ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟ ಮಾಡಲಾಗಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.
ಪ್ರಸಕ್ತ ಸಾಲಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳು ಶೇ.99.09ರಷ್ಟು ಮತ್ತು 12ನೇ ತರಗತಿ ವಿದ್ಯಾರ್ಥಿಗಳು 99.56ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ.

ಯುಬಿಎಸ್ಇ 10 ಮತ್ತು 12ನೇ ತರಗತಿ ಫಲಿತಾಂಶ ಚೆಕ್ ಮಾಡುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ವೆಬ್‌ಸೈಟ್ uaresults.nic.in, ಅಥವಾ ubse.uk.gov.in. ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ಫಲಿತಾಂಶ ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ವಿದ್ಯಾರ್ಥಿಗಳು ಎಸ್‌ಎಂಎಸ್ ಮೂಲಕವೂ ಫಲಿತಾಂಶ ಪಡೆಯಬಹುದಾಗಿದ್ದು, 10ನೇ ತರಗತಿ ವಿದ್ಯಾರ್ಥಿಗಳು UK10ROLLNUMBER ಟೈಪ್ ಮಾಡಿ 56263 ಸಂಖ್ಯೆಗೆ ಕಳುಹಿಸಿ. 12ನೇ ತರಗತಿ ವಿದ್ಯಾರ್ಥಿಗಳು UK12ROLLNUMBER ಟೈಪ್ ಮಾಡಿ 56263 ಸಂಖ್ಯೆಗೆ ಕಳುಹಿಸಿ ಫಲಿತಾಂಶವನ್ನು ನೋಡಬಹುದು.
ಈ ವರ್ಷ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಕೋವಿಡ್ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ವಿದ್ಯಾರ್ಥಿಗಳ ಫಲಿತಾಂಶವನ್ನು ಪರ್ಯಾಯ ಮಾರ್ಗದಲ್ಲಿ ಮೌಲ್ಯಮಾಪನ ಮಾಡಿ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ.


Click it and Unblock the Notifications











