ವಿಜಯ ಬ್ಯಾಂಕ್ 310 ಜವಾನ ಮತ್ತು 122 ಪಾರ್ಟ್ ಟೈಂ ಸ್ವೀಪರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಟಕಣೆ ಹೊರಡಿಸಿತ್ತು. ವಿಜಯ ಬ್ಯಾಂಕ್ ನೇಮಕಾತಿಯ ಪ್ರವೇಶ ಪರೀಕ್ಷೆಯು ನಡೆಯಲಿದ್ದು ಇದೀಗ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಇದೀಗ ಡೌನ್ ಲೋಡ್ ಮಾಡಿಕೊಳ್ಳಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪಿಎಫ್‌ಟಿ ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.
ವಿಜಯ ಬ್ಯಾಂಕ್ ಜವಾನ ಮತ್ತು ಪಾರ್ಟ್ ಟೈಂ ಸ್ವೀಪರ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ
ಸ್ಟೆಪ್ 1: ವಿಜಯ ಬ್ಯಾಂಕ್ ನ ಅಧಿಕೃತ ವೆಬ್ ಸೈಟ್ https://www.vijayabank.com/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್ ನಲ್ಲಿ ಕಾಣಿಸುವ "Careers" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ "Recruitment of Sweepers-Download of Call Letter " ಅಥವಾ "Recruitment of peons -Download of call letter " ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ಹೊಸ ಪುಟ ತೆರೆಯುತ್ತದೆ ಅಲ್ಲಿ "Please Click Here For Downloading the call letter" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ನಿಮ್ಮ ಇ-ಮೇಲ್ ಐಡಿ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 6: ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











