VIT University Scholarship 2021: ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಆಂಧ್ರಪ್ರದೇಶ ಮೂಲದ ವಿಐಟಿ ವಿಶ್ವವಿದ್ಯಾಲಯವು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ವಿಐಟಿ ವಿವಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

೨೦೨೧-೨೨ನೇ ಸಾಲಿನಲ್ಲಿ ಬಿಎ, ಬಿಬಿಎ, ಬಿ.ಕಾಂ, ಕಾನೂನು, ಬಿ.ಎಸ್ಸಿ, ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಅರ್ಜಿಯನ್ನು ಸಲ್ಲಿಸಬಹುದು. ವಿಐಟಿ ಸಂಸ್ಥಾಪಕ ಡಾ.ಜಿ. ವಿಶ್ವನಾಥನ್ (ಜಿವಿ) ಹಾಗೂ ರಾಜೇಶ್ವರಿ ಹೆಸರಿನಲ್ಲಿ ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳಿಗೆ ಈ ಸ್ಕಾಲರ್‌ಶಿಪ್ ಅನ್ನು ನೀಡಲಾಗುತ್ತದೆ.

ಜಿ ವಿಶ್ವನಾಥನ್ ಅವರ ಹೆಸರಲ್ಲಿ ನೀಡಲಾಗುವ ವಿದ್ಯಾರ್ಥಿವೇತನವನ್ನು ಪಡೆಯಲು ಪ್ರಪಂಚದಾದ್ಯಂತದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ರಾಜೇಶ್ವರಿ ರವರ ಹೆಸರಲ್ಲಿ ನೀಡಲಾಗುವ ವಿದ್ಯಾರ್ಥಿವೇತನವನ್ನು ಭಾರತದ ಯಾವುದೇ ರಾಜ್ಯದ ವಿದ್ಯಾರ್ಥಿಗಳು ಪದವಿ, ಸ್ನಾತಕೋತ್ತರ ಪದವಿ ಅಧ್ಯಯನ ಮಾಡಿ ರಾಜ್ಯಮಟ್ಟದಲ್ಲಿ ಟಾಪರ್ ಆಗಿರುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ವಿದ್ಯಾರ್ಥಿನಿಯರಿಗೆ ಶೇಕಡ.25 ವಿದ್ಯಾರ್ಥಿವೇತನವನ್ನು ಹೆಚ್ಚುವರಿಯಾಗಿ ನೀಡಲಾಗುತ್ತದೆ ಎಂದು ಕುಲಪತಿ ಡಾ.ಎಸ್‌.ವಿ ಕೋಟಾ ರೆಡ್ಡಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಸ್ನಾತಕೋತ್ತರ ಪದವಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಪದವಿಯಲ್ಲಿ ಶೇ.90 (ಸಿಜಿಪಿಎ-9) ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಲ್ಲಿ ಶೇಕಡ.100 ವಿದ್ಯಾರ್ಥಿವೇತನ ನೀಡಲಾಗುತ್ತದೆ. ಶೇಕಡ.80 (ಸಿಜಿಪಿಎ-80) ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದವರಿಗೆ ಶೇ.50 ವಿದ್ಯಾರ್ಥಿವೇತನ ಮಾತ್ರ ನೀಡಲಾಗುವುದು. ಈ ಅರ್ಹತೆಗಳಲ್ಲಿಯೂ ವಿದ್ಯಾರ್ಥಿನಿಯರಿಗೆ ಶೇಕಡ.25 ಹೆಚ್ಚುವರಿ ವಿದ್ಯಾರ್ಥಿವೇತನ ನೀಡಲಾಗುತ್ತದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ http://www.vitap.ac.in/ ಗೆ ಭೇಟಿ ನೀಡಿ ಪಡೆದುಕೊಳ್ಳಬಹುದು.

For Quick Alerts
ALLOW NOTIFICATIONS  
For Daily Alerts

English summary
VIT university invited applications from UG/PG students for scholarship 2021. Interested candidates can apply through online before May 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X