Schools, Colleges Reopen In India 2021 : ಯಾವೆಲ್ಲಾ ರಾಜ್ಯಗಳಲ್ಲಿ ಶಾಲೆಗಳು ಮತ್ತೆ ಆರಂಭವಾಗಲಿವೆ ಎಂಬ ಮಾಹಿತಿ ಇಲ್ಲಿದೆ

ಯಾವೆಲ್ಲಾ ರಾಜ್ಯಗಳಲ್ಲಿ ಶಾಲೆಗಳು ಆರಂಭ ; ಇಲ್ಲಿದೆ ಮಾಹಿತಿ

ದೇಶದಾದ್ಯಂತ ಕೋವಿಡ್19 ಸೋಂಕು ಹರಡುತ್ತಿರುವ ಕಾರಣದಿಂದಾಗಿ ಕಳೆದ ವರ್ಷದಿಂದ ಶಾಲಾ ಕಾಲೇಜುಗಳನ್ನು ಮುಚ್ಚಲಾಗಿದೆ. ಇದೀಗ ಕೆಲವು ರಾಜ್ಯಗಳಲ್ಲಿ ಅನ್‌ಲಾಕ್ ಮಾಡಲಾಗುತ್ತಿದ್ದು, ಯಾವೆಲ್ಲಾ ರಾಜ್ಯಗಳಲ್ಲಿ ಶಾಲೆ ಮತ್ತು ಕಾಲೇಜುಗಳು ಮತ್ತೆ ಆರಂಭವಾಗಲಿವೆ ಎಂಬ ಮಾಹಿತಿ ಇಲ್ಲಿದೆ.

 

ದೆಹಲಿ:

ಜೂನ್ 13 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲಿಸಿದ್ದಾರೆ. ವಿದ್ಯಾರ್ಥಿಗಳ ಯೋಗಕ್ಷೇಮವನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದೆ. ಹಾಗಾಗಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಕಲಿಕೆಯತ್ತ ಒತ್ತು ನೀಡಿದೆ.

ಕರೋನವೈರಸ್ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೂ ಶಾಲೆಗಳು ಮತ್ತು ಕಾಲೇಜುಗಳನ್ನು ಫೆಬ್ರವರಿ ತಿಂಗಳಿನಲ್ಲಿ ತೆರೆಯಲಾಗಿತ್ತು ಮತ್ತೆ ಪುನಃ ಮಾರ್ಚ್ ತಿಂಗಳಿನಲ್ಲಿ ಮುಚ್ಚಲಾಯಿತು.

ಜಮ್ಮು ಮತ್ತು ಕಾಶ್ಮೀರ:

ಜಮ್ಮು ಮತ್ತು ಕಾಶ್ಮೀರದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಶಾಲೆ ಮತ್ತು ಕಾಲೇಜುಗಳನ್ನು ಜೂನ್ 30ರ ವರೆಗೆ ಮುಚ್ಚಲಾಗಿರುತ್ತದೆ.

ಹಿಮಾಚಲ ಪ್ರದೇಶ:

ಹಿಮಾಚಲ ಪ್ರದೇಶ ಸರ್ಕಾರವು ಎಲ್ಲಾ ವೈದ್ಯಕೀಯ, ಆಯುರ್ವೇದ ಮತ್ತು ದಂತ ಕಾಲೇಜುಗಳನ್ನು ಜೂನ್ 23 ರಿಂದ ಮತ್ತೆ ತೆರೆಯುವುದಾಗಿ ಘೋಷಿಸಿದೆ. ಫಾರ್ಮಸಿ ಮತ್ತು ನರ್ಸಿಂಗ್ ಶಾಲೆಗಳನ್ನು ಜೂನ್ 28, 2021 ರಿಂದ ಮತ್ತೆ ತೆರೆಯಲ್ಪಡುತ್ತವೆ.

ತೆಲಂಗಾಣ:

ತೆಲಂಗಾಣ ರಾಜ್ಯದಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ಜೂನ್ 20ರ ವರೆಗೆ ಬೇಸಿಗೆ ರಜೆಯನ್ನು ಘೋಷಿಸಲಾಗಿದೆ.

ಕೇರಳ:

ಕೇರಳ ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆಗೊಂಡ ನಂತರ ಪಬ್ಲಿಕ್ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.

ಆಂಧ್ರಪ್ರದೇಶ:

ಕೋವಿಡ್-19 ಪ್ರಕರಣ ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಆಂಧ್ರಪ್ರದೇಶದಲ್ಲಿ ಶಾಲೆಗಳನ್ನು ಮತ್ತೆ ತೆರೆಯುವ ದಿನಾಂಕವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತದೆ.

 

ಕರ್ನಾಟಕ:

ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ನಡುವೆಯೂ ಜೂನ್ 15ರಿಂದ ಶೈಕ್ಷಣಿಕ ವರ್ಷವನ್ನು ಆರಂಭಿಸಲಾಗಿದೆ. ಶಾಲೆಗಳನ್ನು ಜುಲೈ 1 ರಿಂದ ಪ್ರಾರಂಭಿಸಲು ಮುಂದಾಗಿದೆ. ಭೌತಿಕವಾಗಿ ತರಗತಿಗಳನ್ನು ಆರಂಭಿಸಲು ಸಾಧ್ಯವಾಗದೇ ಇದ್ದರೂ ಆನ್‌ಲೈನ್ ಮೂಲಕ ತರಗತಿಗಳನ್ನು ನಡೆಸುವುದಾಗಿ ಪ್ರಕಟಣೆ ಹೊರಡಿಸಿದೆ. ಆನ್‌ಲೈನ್ ಸೌಲಭ್ಯವಿಲ್ಲದ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಲು ಸರ್ಕಾರ ಜವಾಬ್ದಾರಿ ವಹಿಸಿಕೊಂಡಿದೆ.

ಕಾಲೇಜು ಆರಂಭಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ ತಿಂಗಳ ಮೊದಲನೇ ವಾರದಿಂದ ಪದವಿ ತರಗತಿ ಪ್ರವೇಶ ಪ್ರಕ್ರಿಯೆಯು ಆರಂಭವಾಗಲಿದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
When will schools and colleges reopening in india 2021 ? do you want to know, Here is the state wise list. read on.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X