International Women's Day 2022 : ಈ ದಿನದ ಇತಿಹಾಸ, ಮಹತ್ವ ಮತ್ತು ಆಚರಣೆ ಕುರಿತ ಮಾಹಿತಿ

ಹೆಣ್ಣು ಸಮಾಜದ ಕಣ್ಣು, ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ನುಡಿಮುತ್ತುಗಳನ್ನು ನಾವೆಲ್ಲಾ ಕೇಳಿರುತ್ತೇವೆ. ಆದರೆ ಸಮಾಜದಲ್ಲಿ ಮಹಿಳೆಗೆ ಸಲ್ಲಬೇಕಾದ ಗೌರವ ಸಿಗುತ್ತಿದೆಯಾ ? ಆಕೆಗೂ ಒಂದು ಪ್ರಶಂಸನಾ ದಿನವಿದೆಯೇ ಎಂದಾಗ ಹೌದು ಎನ್ನುವುದು ಸಂತಸದ ಸಂಗತಿ. ಹಗಲು ರಾತ್ರಿ ಎನ್ನದೇ ಪಾದರಸದಂತೆ ತನ್ನ ಜೀವನವನ್ನೆಲ್ಲಾ ತನ್ನವರಿಗಾಗಿ ಮೀಸಲಿಡುವ ಮಹಿಳೆಯರಿಗೆ ಗೌರವ ಸಲ್ಲಿಸುವ ಹಿನ್ನೆಲೆಯಲ್ಲಿ ಪ್ರತಿ ವರ್ಷ ಅಂತರರಾಷ್ಟ್ರೀಯ ಮಹಿಳಾ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತದೆ.

 
ಅಂತರರಾಷ್ಟ್ರೀಯ ಮಹಿಳಾ ದಿನದ ಇತಿಹಾಸ ಮತ್ತು ಥೀಮ್ ಇಲ್ಲಿದೆ

ಮಹಿಳೆಯರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸುವರ್ಣಾವಕಾಶ ಒದಗಿಸುವ ದಿನವೆಂದೇ ಸೂಚಿಸಲಾಗಿರುವ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಪ್ರತಿ ವರ್ಷ ಮಾರ್ಚ್ 8ರಂದು ಆಚರಣೆ ಮಾಡಲಾಗುತ್ತದೆ. ಈ ದಿನದ ಇತಿಹಾಸ, ಮಹತ್ವ ಮತ್ತು ಈ ದಿನವನ್ನು ಏಕೆ ಆಚರಿಸಲಾಗುತ್ತದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯೋಣ.

ಅಂತರರಾಷ್ಟ್ರೀಯ ಮಹಿಳಾ ದಿನದ ಇತಿಹಾಸ ಮತ್ತು ಥೀಮ್ ಇಲ್ಲಿದೆ

ಅಂತರರಾಷ್ಟ್ರೀಯ ಮಹಿಳಾ ದಿನ 2022 ದಿನಾಂಕ :

ಪ್ರತಿ ವರ್ಷ ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಈ ದಿನವು ಪ್ರಪಂಚದಾದ್ಯಂತ ಮಹಿಳೆಯರು ತಮ್ಮ ಜೀವನವನ್ನು ಸುಧಾರಿಸಲು ಪಟ್ಟಂತಹ ಶ್ರಮವನ್ನು ಗರುತಿಸುವ ಮತ್ತು ಗೌರವಿಸುವ ಉದ್ದೇಶವನ್ನು ಹೊಂದಿದೆ. ಮಹಿಳೆಯು ಬಹಳಷ್ಟು ಸಾಧಿಸಿದ್ದರೂ ಕೂಡ ಆಕೆಯ ಪ್ರಯಾಣ ದೀರ್ಘವಾಗಿದೆ ಮತ್ತು ಆಕೆ ಇನ್ನೂ ಹೆಚ್ಚಿನದನ್ನು ಸಾಧಿಸಬೇಕಿದೆ ಎಂಬುದನ್ನು ಈ ದಿನ ನೆನಪಿಸುತ್ತದೆ.

ಅಂತರರಾಷ್ಟ್ರೀಯ ಮಹಿಳಾ ದಿನದ ಇತಿಹಾಸ ಮತ್ತು ಥೀಮ್ ಇಲ್ಲಿದೆ

ಅಂತರರಾಷ್ಟ್ರೀಯ ಮಹಿಳಾ ದಿನ 2022 ಇತಿಹಾಸ :

1910ರ ಆಗಸ್ಟ್‌ನಲ್ಲಿ ಡೆನ್ಮಾರ್ಕ್‌ನ ಕೋಪೆನ್‌ಹೇಗನ್‌ನಲ್ಲಿ ಎರಡನೆಯ ಅಂತರರಾಷ್ಟ್ರೀಯ ಸೋಷಿಯಲಿಸ್ಟ್ ಮಹಿಳಾ ಸಮ್ಮೇಳನ ನಡೆಯಿತು. ಅಲ್ಲಿನ ಕಾರ್ಮಿಕರ ಪ್ರತಿನಿಧಿ ಸಭೆಯ ಸಭಾಂಗಣದಲ್ಲಿ 17 ದೇಶಗಳ ಪ್ರತಿನಿಧಿಗಳು ಸೇರಿದ್ದರು. ಅಮೆರಿಕೆಯ ಹಲವಾರು ಕಾರ್ಮಿಕ ಸಂಘಟನೆಗಳ ನಾಯಕಿಯರು ಬಂದಿದ್ದರು. ಈ ಸಮ್ಮೇಳನಕ್ಕೆ ಅಂತರರಾಷ್ಟ್ರೀಯ ಮಹಿಳಾ ಸೆಕ್ರೆಟೇರಿಯೆಟ್‌ನ ಮುಖ್ಯಸ್ಥೆಯಾಗಿದ್ದ ಕ್ಲಾರಾ ಜೆಟ್‌ಕಿನ್ ಅಧ್ಯಕ್ಷೆಯಾಗಿದ್ದರು. ಅಂದಿನ ಸಮ್ಮೇಳನದಲ್ಲಿ ಸಾರ್ವತ್ರಿಕ ಮತದಾನದ ಹಕ್ಕು ಮತ್ತು ಮಹಿಳೆಯರ ಹೆರಿಗೆ ಭತ್ಯೆ ಮತ್ತು ಇತರ ಸೌಕರ್ಯಗಳ ಕುರಿತು ಚರ್ಚಿಸಲಾಯಿತು.

 

ಈ ಸಮ್ಮೇಳನದಲ್ಲಿ ಕ್ಲಾರಾ ಜೆಟ್‌ಕಿನ್ ಮಾರ್ಚ್ 8ನ್ನು ಮಹಿಳಾ ದಿನವನ್ನಾಗಿ ಆಚರಿಸಬೇಕೆಂದು ಪ್ರಸ್ತಾಪಿಸಿದರು. ಅಲ್ಲಿ ನೆರೆದಿದ್ದ ವಿವಿಧ ರಾಷ್ಟ್ರಗಳ ಸದಸ್ಯ ಪ್ರತಿನಿಧಿಗಳು ಸರ್ವಾನುಮತದಿಂದ ಸಮ್ಮತಿಸಿದರು. ಈ ಸಮ್ಮೇಳನದಲ್ಲಿ ಫಿನ್ಲೆಂಡ್‌ನಲ್ಲಿ ಆಗಷ್ಟೇ ಚುನಾಯಿತರಾಗಿದ್ದ ಮೂವರು ಮಹಿಳೆಯರಿದ್ದು, ಅವರು ಜೆಟ್‌ಕಿನ್‌ ಸಲಹೆಯನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು. ಹೀಗೆ ಅಂತರರಾಷ್ಟ್ರೀಯ ಮಹಿಳಾ ದಿನವೆನ್ನುವುದು ಪ್ರತಿಭಟನೆ ಮತ್ತು ರಾಜಕೀಯ ಕ್ರಿಯಾಶೀಲತೆಯ ದಿನವಾಗಿ ಅಸ್ತಿತ್ವಕ್ಕೆ ಬಂದಿತು.

1911ರಲ್ಲಿ ಮತದಾನದ ಹಕ್ಕನ್ನು ಬೇಡಿಕೆಯಾಗಿಟ್ಟುಕೊಂಡು ಮೊದಲ ಬಾರಿ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು. ಇದಕ್ಕೂ ಮೊದಲು 1903ರಲ್ಲಿ ಅಮೆರಿಕೆಯಲ್ಲಿ ಮತದಾನದ ಹಕ್ಕಿಗಾಗಿ ಹೋರಾಟ ನಡೆಸಿದ್ದ ಮಹಿಳಾ ಕಾರ್ಮಿಕ ಸಂಘಟನೆಗಳು 'ಮಹಿಳೆಯರ ಟ್ರೇಡ್ ಯೂನಿಯನ್ ಲೀಗ್' ಸ್ಥಾಪಿಸಿ ರಾಜಕೀಯ ಮತ್ತು ಆರ್ಥಿಕ ಕಲ್ಯಾಣವನ್ನು ತಮ್ಮ ಸಂಘಟನೆಯ ಮುಖ್ಯ ಧ್ಯೇಯವನ್ನಾಗಿಸಿಕೊಂಡವು.

1908ರ ಫೆಬ್ರುವರಿ ತಿಂಗಳ ಕೊನೆಯ ಭಾನುವಾರ ಅಮೆರಿಕೆಯಲ್ಲಿ ಮತದಾನದ ಹಕ್ಕಿಗಾಗಿ ಬೃಹತ್ ಪ್ರತಿಭಟನಾ ಪ್ರದರ್ಶನಗಳು ನಡೆದಿದ್ದವು. ನಂತರ 1909ರಲ್ಲಿ ಸಿದ್ಧ ಉಡುಪುಗಳ ಕಾರ್ಖಾನೆಗಳಲ್ಲಿ 20,000 ದಿಂದ 30,000ದಷ್ಟು ಮಹಿಳೆಯರು ಚಳಿಗಾಲದಲ್ಲಿ 13 ವಾರಗಳ ಕಾಲ ಮುಷ್ಕರ ನಡೆಸಿ ದಸ್ತಗಿರಿಯಾದರು. ಮಹಿಳೆಯರ ಟ್ರೇಡ್ ಯೂನಿ ಯನ್ ಲೀಗ್‌ನವರು ಜಾಮೀನು ನೀಡಿ ಬಂಧಿತ ಕೆಲಸಗಾರರನ್ನು ಬಿಡಿಸಿಕೊಂಡರು. ಈ ಅಮೆರಿಕದ ಮಹಿಳೆಯರ ಹೋರಾಟದಿಂದ ಸ್ಫೂರ್ತಿಗೊಂಡ ಕ್ಲಾರಾ ಜೆಟ್‌ಕಿನ್ ಸೋಷಿಯಲಿಸ್ಟ್ ಮಹಿಳೆಯರ ಸಮ್ಮೇಳನದಲ್ಲಿ ವರ್ಷಕ್ಕೊಮ್ಮೆ ದಿನವನ್ನು ನಿಗದಿಪಡಿಸಿ ಮಹಿಳೆಯರು ತಮ್ಮ ಬೇಡಿಕೆಗಳನ್ನು ಒತ್ತಾಯಿಸಲು ಅನುವಾಗುವಂತಹ ವ್ಯವಸ್ಥೆಗಾಗಿ ಸಲಹೆ ನೀಡಿ ಕಾರ್ಯರೂಪಕ್ಕೆ ತರಲು ಶ್ರಮಿಸಿದರು.

ಶಾಂತಿ ಚಳುವಳಿಯ ಅಂಗವಾಗಿ ರಷ್ಯಾದ ಮಹಿಳೆಯರು ಫೆಬ್ರವರಿಯ ಕೊನೆಯವಾರದಲ್ಲಿ ವಿಶ್ವ ಮಹಿಳಾ ದಿನವನ್ನ ಆಚರಿಸಿ ಗಮನಸೆಳೆದರು. ಅತ್ತ ಯುರೋಪಿನಲ್ಲಿ ಅದೇ ಸಾಲಿನ ಮಾರ್ಚಿ 8 ರಂದು ಮಹಿಳೆಯರು ಯುದ್ಧನೀತಿಯನ್ನ ವಿರೋಧಿಸಿ, ಐಕ್ಯಮತ ವನ್ನ ಸಹಕರಿಸಿ ಬ್ರುಹತ್ ಚಳುವಳಿ ನಡೆಸಿದರು.

ಅಂತರರಾಷ್ಟ್ರೀಯ ಮಹಿಳಾ ದಿನದ ಇತಿಹಾಸ ಮತ್ತು ಥೀಮ್ ಇಲ್ಲಿದೆ

ಅಂತರರಾಷ್ಟ್ರೀಯ ಮಹಿಳಾ ದಿನ 2022 ಥೀಮ್ :

ಪ್ರತಿ ವರ್ಷ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ವಿಶೇಷ ಥೀಮ್‌ ನೊಂದಿಗೆ ಆಚರಿಸಲಾಗುತ್ತದೆ. ಈ ಬಾರಿಯ ಥೀಮ್ - "ಸುಸ್ಥಿರ ನಾಳೆಗಾಗಿ ಇಂದು ಲಿಂಗ ಸಮಾನತೆ".
ಈ ವರ್ಷದ ಥೀಮ್ ಲಿಂಗ ಸಮಾನತೆಯನ್ನು ಒತ್ತಿಹೇಳುತ್ತದೆ. ಕೆಲವು ಸಮಯದಿಂದ ಪ್ರಪಂಚದಾದ್ಯಂತ ಲಿಂಗ ಸಮಾನತೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಜನರು ಈ ವಿಷಯದ ಬಗ್ಗೆ ಬಹಳ ಜಾಗೃತರಾಗಿದ್ದಾರೆ.

ಅಂತರರಾಷ್ಟ್ರೀಯ ಮಹಿಳಾ ದಿನದ ಇತಿಹಾಸ ಮತ್ತು ಥೀಮ್ ಇಲ್ಲಿದೆ

ಅಂತರರಾಷ್ಟ್ರೀಯ ಮಹಿಳಾ ದಿನ 2022 ಮಹತ್ವ ಮತ್ತು ಆಚರಣೆ :

ಅಂತರರಾಷ್ಟ್ರೀಯ ಮಹಿಳಾ ದಿನವು ಯಾವುದೇ ಒಂದು ದೇಶ, ಗುಂಪು ಅಥವಾ ಸಂಘಟನೆಯೊಂದಿಗೆ ಸಂಬಂಧ ಹೊಂದಿರುವುದಿಲ್ಲ.
ಈ ದಿನವನ್ನು ಪ್ರಪಂಚದಾದ್ಯಂತದ ಎಲ್ಲಾ ಮಹಿಳೆಯರಿಗೆ ಸಮರ್ಪಿಸಲಾಗಿದ್ದು, ಮಹಿಳೆಯರ ಸಾಧನೆಗಳನ್ನು ಗುರುತಿಸುವುದು, ಗೌರವಿಸುವುದು ಮತ್ತು ಜನರಲ್ಲಿ ಅರಿವು ಮೂಡಿಸುವ ಸದುದ್ದೇಶವನ್ನು ಹೊಂದಿದೆ.

ಲಿಂಗ ತಾರತಮ್ಯವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಈ ದಿನ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಮತ್ತು ಮಹಿಳೆಯರಿಗೆ ಸಲ್ಲಸಬೇಕಾದ ಹಕ್ಕು ಮತ್ತು ಗೌರವಗಳನ್ನು ತಿಳಿಸಲು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಹೀಗೆ ಹಲವಾರು ರೀತಿಯಲ್ಲಿ ಮಹಿಳೆಯ ದಿನವನ್ನು ಸಂತಸ ಮತ್ತು ಸಂಭ್ರಮದದಿಂದ ಆಚರಣೆಯನ್ನು ಮಾಡಲಾಗುತ್ತದೆ.

For Quick Alerts
ALLOW NOTIFICATIONS  
For Daily Alerts

English summary
International women's day is celebrated on march 8. Here is the information about theme, history, significance and why it is celebrated in kannada.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X