Speech On International Women's Day : ಅಂತರರಾಷ್ಟ್ರೀಯ ಮಹಿಳಾ ದಿನದ ಕುರಿತು ಭಾಷಣಕ್ಕೆ ವಿದ್ಯಾರ್ಥಿಗಳಿಗೆ ಮಾಹಿತಿ

ಪ್ರತಿ ವರ್ಷ ಮಾರ್ಚ್ 8ರಂದು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು ಎಲ್ಲಾ ಮಹಿಳೆಯರಿಗೆ ಗೌರವವನ್ನು ಸಲ್ಲಿಸುವ ಉದ್ದೇಶದಿಂದ ಶಾಲಾ ಕಾಲೇಜುಗಳಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಅವುಗಳಲ್ಲಿ ಭಾಷಣ ಕಾರ್ಯಕ್ರವು ಪ್ರಮುಖವಾಗಿರುತ್ತದೆ. ಭಾಷಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ವಿದ್ಯಾರ್ಥಿಗಳು ಮತ್ತು ಮಕ್ಕಳ ಭಾಷಣ ತಯಾರಿಗೆ ಸಲಹೆಗಳನ್ನು ಇಲ್ಲಿ ನೀಡಲಾಗಿದೆ ಓದಿ ಸಿದ್ಧತೆಯನ್ನು ನಡೆಸಿ.

ಅಂತರರಾಷ್ಟ್ರೀಯ ಮಹಿಳಾ ದಿನಕ್ಕೆ ಭಾಷಣ ಮಾಡಲು ಮಾಹಿತಿ

ಮಹಿಳಾ ದಿನದ ಭಾಷಣಕ್ಕೆ ಸಲಹೆಗಳು :

* ಅಂತರರಾಷ್ಟ್ರೀಯ ಮಹಿಳಾ ದಿನದ ಭಾಷಣವನ್ನು ಕಡಿಮೆ ಅವಧಿಯಲ್ಲಿ ಮಾಡಿ ಮುಗಿಸಿ ಏಕೆಂದರೆ ವಿದ್ಯಾರ್ಥಿಗಳು ಸುದೀರ್ಘವಾದ ಭಾಷಣವನ್ನು ಕಲಿಯಲು ಸಾಧ್ಯವಾಗದಿರಬಹುದು.
* ಅಂತರಾಷ್ಟ್ರೀಯ ಮಹಿಳಾ ದಿನದ ಭಾಷಣದಲ್ಲಿ ವಿದ್ಯಾರ್ಥಿಗಳು ಕಷ್ಟಕರ ಪದಗಳನ್ನು ಬಳಸಬೇಡಿ.
* ಭಾಷಣವನ್ನು ಸರಳವಾಗಿ ಇರಿಸಿ ಇದರಿಂದ ವಿದ್ಯಾರ್ಥಿಗಳು ಕಲಿಯಲು ಸಾಧ್ಯವಾಗುತ್ತದೆ.
* ವಿದ್ಯಾರ್ಥಿಗಳು ಮತ್ತು ಮಕ್ಕಳು ಭಾಷಣವನ್ನು ಹಲವಾರು ಬಾರಿ ಅಭ್ಯಾಸ ಮಾಡಿ.

ಅಂತರರಾಷ್ಟ್ರೀಯ ಮಹಿಳಾ ದಿನದ ಕುರಿತು ಭಾಷಣ :

ಮಹಿಳೆ ತನ್ನ ಜೀವನದಲ್ಲಿ ವಿವಿಧ ಪಾತ್ರಗಳನ್ನು ನಿಭಾಯಿಸುತ್ತಾಳೆ ಎಂತಹುದೇ ಸಂದರ್ಭದಲ್ಲೂ ಧೃತಿಗೆಡದೆ ತಾನು ಜಯಿಸುತ್ತಾಳೆ. ಅಂತಹ ಮಹಿಳೆಯರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಣೆ ಮಾಡಲಾಗುತ್ತದೆ.

ಅಂತರರಾಷ್ಟ್ರೀಯ ಮಹಿಳಾ ದಿನವು ಮಹಿಳೆಯರ ಮಹತ್ವ ಮತ್ತು ಅವರಿಗೆ ಸಿಗಬೇಕಾದ ಹಕ್ಕುಗಳ ಅರಿವನ್ನು ಮೂಡಿಸುವ ಪ್ರಯತ್ನ ಮಾಡಲಾಗುತ್ತದೆ. ಸಮಾಜದಲ್ಲಿ ಮಹಿಳೆಯರ ಉಪಸ್ಥಿತಿಯನ್ನು ಗೌರವಿಸಲು ಮತ್ತು ಅವರ ಸಾಧನೆಗಳನ್ನು ಗುರುತಿಸಲು ನಾವಿಂದು ಇಲ್ಲಿ ಆಚರಣೆಯನ್ನು ಮಾಡುತ್ತಿದ್ದೇವೆ.

ಸೋವಿಯತ್ ರಷ್ಯಾದಲ್ಲಿ ಮಹಿಳೆಯರು 1917 ರಲ್ಲಿ ನೀಡಲಾದ ಮತದಾನದ ಹಕ್ಕಿಗಾಗಿ ಪ್ರತಿಭಟನೆಗಳನ್ನು ಪ್ರಾರಂಭಿಸಿದ ದಿನವನ್ನು ಗುರುತಿಸುವುದರಿಂದ ಮಾರ್ಚ್ 8 ದಿನಾಂಕವನ್ನು ಆಚರಣೆಗೆ ಆಯ್ಕೆ ಮಾಡಲಾಯಿತು. ಈ ದಿನವು ನಮ್ಮ ಜೀವನದಲ್ಲಿ ಮತ್ತು ಸುತ್ತಮುತ್ತಲಿನ ಮಹಿಳೆಯರ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಅಂಗೀಕರಿಸುತ್ತದೆ.

ಭಾಷಣ 2 :

ಪ್ರಪಂಚದಾದ್ಯಂತ ಪ್ರತಿ ವರ್ಷ ಮಾರ್ಚ್ 8ರಂದು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಇದು ವಿವಿಧ ಸಾಮಾಜಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆಗಳನ್ನು ಗುರುತಿಸಲು ಮೀಸಲಾದ ದಿನವಾಗಿದೆ.

1908ರಲ್ಲಿ ಅಮೆರಿಕದಲ್ಲಿ ಕಾರ್ಮಿಕ ಚಳವಳಿ ನಡೆದಿತ್ತು. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದುಡಿಯುವ ಮಹಿಳೆಯರು ಪಾಲ್ಗೊಂಡಿದ್ದರು. ಸುಮಾರು 15,000 ಮಹಿಳೆಯರು ನ್ಯೂಯಾರ್ಕ್ ಬೀದಿಗಳಲ್ಲಿ ಮೆರವಣಿಗೆ ನಡೆಸಿದ್ದರು ಮತ್ತು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿದ್ದರು. ತಮ್ಮ ಕೆಲಸದ ಅವಧಿಯನ್ನು ಕಡಿಮೆ ಮಾಡಬೇಕು ಮತ್ತು ವೇತನ ಶ್ರೇಣಿಯನ್ನು ಹೆಚ್ಚಿಸಬೇಕು ಎಂದು ಕಾರ್ಮಿಕ ಮಹಿಳೆಯರು ಒತ್ತಾಯಿಸಿದ್ದರು. ಮಹಿಳೆಯರಿಗೂ ಮತದಾನದ ಹಕ್ಕನ್ನು ನೀಡಬೇಕೆಂದು ಬೇಡಿಕೆಯಿಟ್ಟಿದ್ದರು. ಮಹಿಳೆಯರ ಧ್ವನಿ ಅಂದಿನ ಸರ್ಕಾರದ ಕಿವಿಗೆ ಬಿದ್ದಿತ್ತು. ನಂತರ 1909 ರಲ್ಲಿ, ಚಳುವಳಿಯ ಒಂದು ವರ್ಷದ ನಂತರ, ಅಮೆರಿಕಾದ ಸಮಾಜವಾದಿ ಪಕ್ಷ ಮಹಿಳಾ ದಿನವನ್ನು ಘೋಷಿಸಿತು. ಅಂದಿನಿಂದ ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ.

ಸಮಾಜದಲ್ಲಿ ಮಹಿಳಾ ಹಕ್ಕುಗಳು ಮತ್ತು ಲಿಂಗ ಸಮಾನತೆಯ ಬಗ್ಗೆ ಜಾಗೃತಿ ಮೂಡಿಸುವುದು ಇಂದು ಅಗತ್ಯವಾಗಿದೆ. ಹೆಣ್ಣು ಭ್ರೂಣ ಹತ್ಯೆ, ಬಾಲ್ಯ ವಿವಾಹ, ಅಧ್ಯಯನಕ್ಕೆ ಅವಕಾಶ ನೀಡದಿರುವುದು, ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರಗಳು ಹೆಣ್ಣು ಮಗು ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳಾಗಿವೆ. ಮಹಿಳೆಯರಿಂದ ರೂಪುಗೊಂಡ ದಿನವು ಪ್ರಪಂಚದಾದ್ಯಂತ ಕೆಲವು ಸ್ಥಳಗಳಲ್ಲಿ ಮರೆತುಹೋದ ಮಹಿಳಾ ಹಕ್ಕುಗಳು ಮತ್ತು ಲಿಂಗ ಸಮಾನತೆಯ ಕಡೆಗೆ ಗಮನವನ್ನು ತರಲು ಸಹಾಯ ಮಾಡುತ್ತದೆ. ಮಹಿಳೆಯರ ವಿರುದ್ಧ ನಡೆಯುತ್ತಿರುವ ಎಲ್ಲಾ ತಾರತಮ್ಯಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುವ ದಿನವನ್ನು ಹೊಂದುವುದು ಮುಖ್ಯವಾಗಿದೆ. ಮಹಿಳಾ ದಿನವನ್ನು ನಮ್ಮ ಜೀವನದಲ್ಲಿ ಮತ್ತು ಪ್ರಪಂಚದಾದ್ಯಂತ ಮಹಿಳೆಯರ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಎಲ್ಲರೂ ಅಂಗೀಕರಿಸುವ ದಿನವೆಂದು ಪರಿಗಣಿಸಬೇಕು.

For Quick Alerts
ALLOW NOTIFICATIONS  
For Daily Alerts

English summary
International women's day is celebrated on march 8. Here is information to do speech for students and children in kannada.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X