International Yoga Day 2022 : ಅಂತರಾಷ್ಟ್ರೀಯ ಯೋಗ ದಿನದ ಥೀಮ್, ಇತಿಹಾಸ ಮತ್ತು ಮಹತ್ವವೇನು ಗೊತ್ತಾ ?

ಅಂತರಾಷ್ಟ್ರೀಯ ಯೋಗ ದಿನದ ಥೀಮ್, ಇತಿಹಾಸ ಮತ್ತು ಮಹತ್ವ ಇಲ್ಲಿ ತಿಳಿಯಿರಿ

ಆರೋಗ್ಯ ಎನ್ನುವುದು ಎಷ್ಟು ಮುಖ್ಯ ಅನ್ನುವುದು ಇತ್ತೀಚೆಗೆ ನಿಮಗೆಲ್ಲಾ ತಿಳಿದೇ ಇದೆ. ನೀವು ಆರೋಗ್ಯವಾಗಿರಬೇಕಾದರೆ ವ್ಯಾಯಾಮ ಮತ್ತು ಯೋಗ ಎಷ್ಟು ಮುಖ್ಯ ಎನ್ನುವುದು ತಿಳಿದಿದೆಯಾ ? ಹೌದು ಪ್ರತಿ ಮನುಷ್ಯನಿಗೂ ದೈಹಿಕ ವ್ಯಾಯಾಮ ತುಂಬಾನೆ ಮುಖ್ಯ. ನಾವೆಲ್ಲಾ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಲು ಯೋಗ ಹೆಚ್ಚು ಪ್ರಾಮುಖ್ಯತೆಯನ್ನು ಹೊಂದಿದೆ. ಈ ನಿಟ್ಟಿನಲ್ಲಿ ಪ್ರತಿ ವರ್ಷ ಜೂನ್ 21ರಂದು ಯೋಗ ದಿನವನ್ನು ಆಚರಿಸಲಾಗುತ್ತದೆ. ಬನ್ನಿ ಈ ದಿನದ ಇತಿಹಾಸ, ಥೀಮ್ ಮತ್ತು ಮಹತ್ವವನ್ನು ತಿಳಿಯೋಣ.

ಅಂತರಾಷ್ಟ್ರೀಯ ಯೋಗ ದಿನದ ಇತಿಹಾಸ:

ಸೆಪ್ಟೆಂಬರ್ 27, 2014 ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುಎನ್‌ಜಿಎ) ತಮ್ಮ ಭಾಷಣದಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಡೆಸುವ ಪ್ರಸ್ತಾಪವನ್ನು ಮಾಡಿದರು. ಯೋಗದ ಏಕತೆಯನ್ನು ಸಾಕಾರಗೊಳಿಸುವಂತೆ ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಮನಸ್ಸು ಮತ್ತು ದೇಹ; ಚಿಂತನೆ ಮತ್ತು ಕ್ರಿಯೆ; ಸಂಯಮ ಮತ್ತು ನೆರವೇರಿಕೆ; ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಾಮರಸ್ಯ; ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಸಮಗ್ರ ವಿಧಾನ. ಪ್ರಸ್ತಾವನೆಯ ನಂತರ ಯುಎನ್‌ಜಿಎ ಕರಡು ನಿರ್ಣಯದ ಬಗ್ಗೆ ಅನೌಪಚಾರಿಕ ಸಮಾಲೋಚನೆ ನಡೆಸಿ ಒಪ್ಪಂದಕ್ಕೆ ಬಂದಿತು. 2014 ರ ಡಿಸೆಂಬರ್ 11 ರಂದು ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜೂನ್ 21 ಅನ್ನು ಅಂತರರಾಷ್ಟ್ರೀಯ ಯೋಗ ದಿನ ಅಥವಾ ವಿಶ್ವ ಯೋಗ ದಿನವಾಗಿ ಘೋಷಿಸಲಾಯಿತು. ವಿಶ್ವ ಸಂಸ್ಥೆಯ 193 ರಾಷ್ಟ್ರಗಳ ಪೈಕಿ 177 ದೇಶಗಳು ಅನುಮೋದನೆಯನ್ನು ನೀಡಿದ್ದವು. 2015ರ ಜೂನ್ 21ನೇ ತಾರೀಖಿನಂದು ಮೊದಲ ಅಂತಾರಾಷ್ಟ್ರೀಯ ಯೋಗ ದಿನವನ್ನು ವಿಶ್ವದಾದ್ಯಂತ ಆಚರಿಸಲಾಯಿತು.

ಅಂತರಾಷ್ಟ್ರೀಯ ಯೋಗ ದಿನದ ದಿನಾಂಕ ಮತ್ತು ಥೀಮ್:

ಪ್ರತಿ ವರ್ಷ ಅಂತರರಾಷ್ಟ್ರೀಯ ಯೋಗ ದಿನವನ್ನು ಜೂನ್ 21 ರಂದು ಆಚರಿಸಲಾಗುವುದು. ವಿಶ್ವವು ಈ ವರ್ಷ ಏಳನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಿದೆ.

ವಿಶ್ವ ಯೋಗ ದಿನವನ್ನು ಪ್ರತಿವರ್ಷ ವಿಶಿಷ್ಟ ವಿಷಯದೊಂದಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲಾಗುತ್ತದೆ. ಈ ವರ್ಷದ ಥೀಮ್ "ಯೋಗದೊಂದಿಗೆ ಇರಿ, ಮನೆಯಲ್ಲೇ ಇರಿ"

ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಮಹತ್ವ:

2015ರ ನಂತರ ಯೋಗ ಮಾಡುವುದರಿಂದ ಆರೋಗ್ಯಕ್ಕೆ ಆಗುವ ಪ್ರಯೋಜನಗಳು ಮತ್ತು ಅದರ ವಿವಿಧ ಅಭ್ಯಾಸಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜೂನ್ 21 ರಂದು ಪ್ರಪಂಚದಾದ್ಯಂತ ವಾರ್ಷಿಕವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಇದನ್ನು ಅಭ್ಯಾಸ ಮಾಡುವುದರಿಂದ ಪಡೆಯಬಹುದಾದ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಪ್ರಯೋಜನಗಳ ಬಗ್ಗೆ ಜನರಿಗೆ ತಿಳಿಸುವುದು ಇದರ ಉದ್ದೇಶವಾಗಿದೆ. ಉತ್ತರ ಗೋಳಾರ್ಧದಲ್ಲಿ ವರ್ಷದ ಅತಿ ಉದ್ದದ ದಿನವಾದ್ದರಿಂದ ಜೂನ್ 21 ರ ದಿನಾಂಕವನ್ನು ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದರು.

ಅಂತರಾಷ್ಟ್ರೀಯ ಯೋಗ ದಿನ 2022 ಆಚರಣೆ:

ಪ್ರತಿ ವರ್ಷ ಈ ದಿನದಂದು ಹಲವೆಡೆ ಯೋಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಆದರೆ ಈ ಭಾರಿ ಕೊರೋನಾ ಇರುವ ಕಾರಣದಿಂದಾಗಿ ಆಚರಣೆಯು ವಿಭಿನ್ನವಾಗಿರುತ್ತದೆ.

ಹಿಂದಿನ ಸಂದರ್ಭಗಳಿಗಿಂತ ಭಿನ್ನವಾಗಿ ಈ ವರ್ಷ ಮನೆಯಲ್ಲೇ ಅಥವಾ ಅಂತರ್ಜಾಲದ ಮೂಲಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಯಾವುದೇ ರೀತಿಯ ಸಾಮೂಹಿಕ ಕೂಟಗಳು ಇರುವುದಿಲ್ಲ.

For Quick Alerts
ALLOW NOTIFICATIONS  
For Daily Alerts

English summary
International yoga day is on june 21. Here is the history, theme and significance of the day.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X