Kannada Rajyotsava 2021 : ಕನ್ನಡ ರಾಜ್ಯೋತ್ಸವದ ಇತಿಹಾಸ, ಮಹತ್ವ ಮತ್ತು ಆಚರಣೆಯ ಬಗ್ಗೆ ತಿಳಿಯಿರಿ

ಕರ್ನಾಟಕದಲ್ಲಿ ಪ್ರತಿ ವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. 1956 ರ ನವೆಂಬರ್ 1 ರಂದು ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ಕರ್ನಾಟಕ ಎಂಬ ಒಂದು ರಾಜ್ಯವನ್ನು ರೂಪಿಸಲು ವಿಲೀನಗೊಳಿಸಲಾಯಿತು. ಅಂದಿನಿಂದ ಈ ದಿನವನ್ನು ಕರ್ನಾಟಕ ರಾಜ್ಯೋತ್ಸವ, ಕನ್ನಡ ದಿನ ಅಥವಾ ಕರ್ನಾಟಕ ರಚನೆ ದಿನ ಎಂದು ಆಚರಿಸಲಾಗುತ್ತದೆ.

 
ಕನ್ನಡ ರಾಜ್ಯೋತ್ಸವದ ಇತಿಹಾಸ, ಮಹತ್ವ ಮತ್ತು ಆಚರಣೆಯ ಕುರಿತು ಇಲ್ಲಿದೆ ಮಾಹಿತಿ

ಈ ದಿನದಂದು ಇಡೀ ಕರ್ನಾಟಕ ರಾಜ್ಯವು ಹಬ್ಬದಂತೆ ಕಂಗೊಳಿಸುತ್ತಿರುತ್ತದೆ. ಬೀದಿಗಳು, ಮನೆಗಳು, ವಾಹನಗಳು ಮತ್ತು ಸಂಸ್ಥೆಗಳು ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳಿಂದ ಅಲಂಕರಿಸಿರುತ್ತದೆ. ರಾಜಕೀಯ ಪಕ್ಷಗಳ ಕಚೇರಿಗಳು ಮತ್ತು ವಿವಿಧ ಪ್ರದೇಶಗಳಲ್ಲಿ ರಾಜ್ಯ ಧ್ವಜವನ್ನು ಹಾರಿಸಲಾಗುತ್ತದೆ. ರಾಜ್ಯೋತ್ಸವವನ್ನು ಹಿಂದೂಗಳು ಮಾತ್ರವಲ್ಲದೆ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಕೂಡ ಆಚರಿಸುತ್ತಾರೆ ಏಕೆಂದರೆ ಇದು ಧಾರ್ಮಿಕ ಹಬ್ಬವಲ್ಲ ಆದರೆ ರಾಜ್ಯದ ಏಕತೆಯನ್ನು ಗುರುತಿಸುತ್ತದೆ. ಬನ್ನಿ ಈ ದಿನದ ಇತಿಹಾಸ, ಮಹತ್ವ ಮತ್ತು ಆಚರಣೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಇಲ್ಲಿ ಪಡೆಯೋಣ.

ಕನ್ನಡ ರಾಜ್ಯೋತ್ಸವ ಯಾವಾಗ?:

ಕರ್ನಾಟಕ ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವವು ಸಾರ್ವಜನಿಕ ರಜಾದಿನವಾಗಿದೆ. ಇದನ್ನು ಯಾವಾಗಲೂ ನವೆಂಬರ್ 1 ರಂದು ಆಚರಿಸಲಾಗುತ್ತದೆ. ಇದನ್ನು ಕರ್ನಾಟಕ ರಚನೆ ದಿನ ಎಂದೂ ಕರೆಯುತ್ತಾರೆ.

ಕನ್ನಡ ರಾಜ್ಯೋತ್ಸವದ ಇತಿಹಾಸ:

ಕರ್ನಾಟಕದ ಹುಟ್ಟಿಗೆ ಕಾರಣರಾದ ಕನ್ನಡದ ಕುಲಪುರೋಹಿತ ಎಂದೇ ಹೆಸರಾದ ಆಲೂರು ವೆಂಕಟರಾವ್ ಅವರು ಮೊದಲಿಗೆ ಕರ್ನಾಟಕ ಏಕೀಕರಣ ಚಳುವಳಿಯನ್ನು ಸ್ವಾತಂತ್ರ್ಯ ಪೂರ್ವವೇ 1905ರಲ್ಲಿ ಪ್ರಾರಂಭಿಸಿದರು. ನಂತರ ಭಾರತಕ್ಕೆ ಸ್ವಾತಂತ್ರ್ಯ ದೊರೆತು ಗಣರಾಜ್ಯವಾದ ನಂತರ ಭಾಷೆಗಳ ಆಧಾರದ ಮೇಲೆ 1956ರ ನವೆಂಬರ್ 1ರಂದು ರಾಜ್ಯಗಳನ್ನು ವಿಂಗಡಿಸಿದರು. ಅದರಂತೆ ಮದ್ರಾಸ್, ಮುಂಬಯಿ ಮತ್ತು ಹೈದರಾಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳೆಲ್ಲವೂ ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು. ನಂತರ ಮೈಸೂರು ರಾಜ್ಯವನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಯಿತು. ಅವುಗಳೆಂದರೆ ಉತ್ತರ ಕರ್ನಾಟಕ, ಹಳೆಯ ಮೈಸೂರು ಹಾಗೂ ಮಲೆನಾಡು. 1973ರ ನವೆಂಬರ್ 1ರಂದು ಅಂದಿನ ಮುಖ್ಯಮಂತ್ರಿ ದೇವರಾಜ್ ಅರಸು ಅವರ ಅವಧಿಯಲ್ಲಿ ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು.

 

ಕನ್ನಡ ರಾಜ್ಯೋತ್ಸವದ ಮಹತ್ವ:

ಕನ್ನಡ ರಾಜ್ಯೋತ್ಸವವನ್ನು ವಿಶ್ವದಾದ್ಯಂತ ಕನ್ನಡಿಗರು ಆಚರಿಸುತ್ತಾರೆ. ಪ್ರತಿ ವರ್ಷ ಈ ದಿನ ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಸಾಹಿತ್ಯ, ಕೃಷಿ, ಪರಿಸರ, ವೈದ್ಯಕೀಯ, ಸಂಗೀತ, ಕ್ರೀಡೆ, ಯೋಗ, ಚಲನಚಿತ್ರಗಳು, ದೂರದರ್ಶನ, ಶಿಕ್ಷಣ, ಪತ್ರಿಕೋದ್ಯಮ, ಸಮಾಜ ಸೇವೆ, ನ್ಯಾಯಾಂಗ ಸೇರಿದಂತೆ ಇತರ ಕ್ಷೇತ್ರಗಳಲ್ಲಿನ ಸಾಧಕರಿಗೆ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ಕನ್ನಡ ರಾಜ್ಯೋತ್ಸವದ ಆಚರಣೆಗಳು:

ರಾಜ್ಯೋತ್ಸವ ದಿನವು ವರ್ಣರಂಜಿತ ಆಚರಣೆಯಾಗಿದ್ದು, ಕರ್ನಾಟಕದಾದ್ಯಂತ ರಾಜ್ಯ ಧ್ವಜದ ಕೆಂಪು ಮತ್ತು ಹಳದಿಗಳನ್ನು ಪ್ರದರ್ಶಿಸಲಾಗುತ್ತದೆ. ಬೆಂಗಳೂರಿನ ಕ್ರಾಂತಿವೀರ ಕ್ರೀಡಾಂಗಣದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ರಾಜ್ಯ ಧ್ವಜಾರೋಹಣ ಮತ್ತು ಭಾಷಣ ಮಾಡುವ ಮೂಲಕ ಮುಖ್ಯ ಆಚರಣೆಗಳು ನಡೆಯುತ್ತವೆ. ರಾಜ್ಯದ ರಾಜ್ಯಪಾಲರು ಕೂಡ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದರ ಜೊತೆಗೆ ಕರ್ನಾಟಕದ ಅಭಿವೃದ್ಧಿಗೆ ಉತ್ತಮ ಕೊಡುಗೆ ನೀಡಿದ ಜನರಿಗೆ ರಾಜ್ಯ ಸರ್ಕಾರವು ಈ ದಿನದಂದು 'ರಾಜ್ಯೋತ್ಸವ ಪ್ರಶಸ್ತಿ'ಗಳನ್ನು ನೀಡುತ್ತದೆ. ಇದು ರಾಜ್ಯದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಎಂದು ಪರಿಗಣಿಸಲಾಗಿದೆ. ಜಯ ಭಾರತ ಜನನಿಯ ತನುಜಾತೆ ಕನ್ನಡ ಗೀತೆಯೂ ಕೂಡ ಇಂದು ಮೊಳಗುತ್ತದೆ.

ದೇಶದ ಐಟಿ ರಾಜಧಾನಿಯಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಖಾಸಗಿ ಕಂಪನಿಗಳು, ಶಾಲೆಗಳು ಮತ್ತು ಕಾಲೇಜುಗಳು ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ. ಇದು ಜಾತ್ಯತೀತ ರಜಾದಿನವಾಗಿರುವುದರಿಂದ ಎಲ್ಲಾ ಕನ್ನಡಿಗರು, ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ನರು ಸೇರಿ ಈ ದಿನವನ್ನು ಆಚರಿಸುತ್ತಾರೆ.

ಕರ್ನಾಟಕದ ಬಗ್ಗೆ:

ಭಾರತದ ಪಶ್ಚಿಮ ಕರಾವಳಿಯಲ್ಲಿ ನೆಲೆಗೊಂಡಿರುವ ಕರ್ನಾಟಕವು ವಿಸ್ತೀರ್ಣದಲ್ಲಿ ದೇಶದ ಆರನೇ ಅತಿದೊಡ್ಡ ರಾಜ್ಯವಾಗಿದೆ ಮತ್ತು 60 ದಶಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಎಂಟನೇ ಅತಿದೊಡ್ಡ ರಾಜ್ಯವಾಗಿದೆ.

ಭಾರತದ ಸ್ಕಾಟ್ಲೆಂಡ್ ಎಂದೂ ಕರೆಯಲ್ಪಡುವ ಕೂರ್ಗ್ ಮತ್ತು ಚಿಕ್ಕಮಗಳೂರಿನಂತಹ ಕೆಲವು ಸುಂದರವಾದ ತಾಣಗಳನ್ನು ರಾಜ್ಯವು ಹೊಂದಿದೆ. ಅಲ್ಲದೆ ಕರ್ನಾಟಕವನ್ನು ಭಾರತದಲ್ಲಿ ಅತಿ ಹೆಚ್ಚು ಕಾಫಿ ಉತ್ಪಾದಕರನ್ನಾಗಿ ಗುರುತಿಸಿಕೊಂಡಿದೆ.

For Quick Alerts
ALLOW NOTIFICATIONS  
For Daily Alerts

English summary
Kannada rajyotsava is on november 1. Here is the history, significance and celebration of 66th karnataka foundation day in kannada.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X