National Pollution Control Day 2021 : ಈ ದಿನದ ಇತಿಹಾಸ ಮತ್ತು ಮಹತ್ವ ಕುರಿತು ಮಾಹಿತಿ

ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನ 2021 : ಭೋಪಾಲ್ ಅನಿಲ ದುರಂತದ ಘಟನೆಯ ನೆನಪಿಗಾಗಿ ಪ್ರತಿ ವರ್ಷ ಡಿಸೆಂಬರ್ 2 ರಂದು ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನವನ್ನು ಆಚರಿಸಲಾಗುತ್ತದೆ. ಮಾನವನ ಮೇಲೆ ಮಾಲಿನ್ಯದ ಪರಿಣಾಮಗಳು ಮತ್ತು ಪರಿಸರದ ಮೇಲೆ ಮಾನವನ ಅಪಾಯಕಾರಿ ಚಟುವಟಿಕೆಗಳ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಗುರುತಿಸಲಾಗಿದೆ.

 
ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನದ ಇತಿಹಾಸ ಮತ್ತು ಮಹತ್ವ ತಿಳಿಯಿರಿ

ಪರಿಸರ ಮಾಲಿನ್ಯವು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ನಾವು ಊಹಿಸಿಕೊಳ್ಳುವುದಕ್ಕಿಂತ ಹೆಚ್ಚು ನಮ್ಮ ಜೀವನದ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಪರಿಸರ ಮಾಲಿನ್ಯವು ಮುಖ್ಯವಾಗಿ ಮಾನವನ ಚಟುವಟಿಕೆಗಳಿಂದ ಉಂಟಾಗುತ್ತಿದೆ ಅಲ್ಲದೇ ಅನೇಕ ರೀತಿಯಲ್ಲಿ ನಾವು ಪರಿಸರಕ್ಕೆ ಹಾನಿ ಮಾಡುತ್ತಿದ್ದೇವೆ. ಇತ್ತೀಚಿನ ದಿನಗಳಲ್ಲಿ ಮಾಲಿನ್ಯ ತಡೆಗಟ್ಟುವಿಕೆ ಒಂದು ಪ್ರಮುಖ ಜಾಗತಿಕ ಕಾಳಜಿಯಾಗಿದೆ ಏಕೆಂದರೆ ಭೂಮಿಯ ಮೇಲಿನ ಪ್ರತಿಯೊಬ್ಬರೂ ಉಸಿರಾಡಲು ಶುದ್ಧ ಗಾಳಿ, ಕುಡಿಯಲು ನೀರು ಮತ್ತು ಸಾರ್ವಜನಿಕ ಭೂಮಿಯನ್ನು ಆನಂದಿಸಲು ಅರ್ಹರಾಗಿದ್ದಾರೆ.

ವಂಗಾರಿ ಮಾತಾಯಿ ಒಮ್ಮೆ ಹೇಳಿದರು, "ನಾವು ಭೂಮಿಯನ್ನು ಗುಣಪಡಿಸಿದರೆ, ನಾವು ನಮ್ಮನ್ನು ಗುಣಪಡಿಸುತ್ತೇವೆ." ಹೀಗಾಗಿ ಕೈಗಾರಿಕಾ ವಿಪತ್ತುಗಳನ್ನು ನಿರ್ವಹಿಸುವ ಮತ್ತು ನಿಯಂತ್ರಿಸುವ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಕೈಗಾರಿಕಾ ಪ್ರಕ್ರಿಯೆಗಳು ಅಥವಾ ಮಾನವ ನಿರ್ಲಕ್ಷ್ಯದಿಂದ ಉಂಟಾಗುವ ಮಾಲಿನ್ಯವನ್ನು ತಡೆಗಟ್ಟಲು ಪ್ರತಿ ವರ್ಷ ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನ 2021 : ಇತಿಹಾಸ

ಡಿಸೆಂಬರ್ 2 ಅನ್ನು ಪ್ರತಿ ವರ್ಷ ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನವನ್ನಾಗಿ ಆಚರಿಸಲಾಗುತ್ತದೆ. ಮಧ್ಯಪ್ರದೇಶದ ಯೂನಿಯನ್ ಕಾರ್ಬೈಡ್ ಇಂಡಿಯಾ ಲಿಮಿಟೆಡ್ ಕೀಟನಾಶಕ ಘಟಕದಲ್ಲಿ ಡಿಸೆಂಬರ್ 2 ಮತ್ತು 3, 1984 ರ ರಾತ್ರಿ ಭೋಪಾಲ್ ಅನಿಲ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ.

5 ಲಕ್ಷಕ್ಕೂ ಹೆಚ್ಚು ಜನರು ಮೀಥೈಲ್ ಐಸೊಸೈನೇಟ್ ಅನಿಲದ ವಿಷಕಾರಿ ಹೊಗೆಗೆ ಒಡ್ಡಿಕೊಂಡರು ಮತ್ತು 3,700 ಕ್ಕೂ ಹೆಚ್ಚು ಸಾವುಗಳು ವರದಿಯಾಗಿದೆ ಎಂದು ಮಧ್ಯಪ್ರದೇಶ ಸರ್ಕಾರವು ವರದಿ ಮಾಡಿದೆ. ಈ ವರ್ಷ ಭೋಪಾಲ್ ಅನಿಲ ದುರಂತದ 37 ನೇ ವಾರ್ಷಿಕೋತ್ಸವವನ್ನು ಇಂದು ನೆನಪಿಸುತ್ತದೆ. ಭೋಪಾಲ್ ಅನಿಲ ದುರಂತವನ್ನು ಅತಿದೊಡ್ಡ ಕೈಗಾರಿಕಾ ಮಾಲಿನ್ಯ ವಿಪತ್ತುಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.

 

ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನ 2021 : ಮಹತ್ವ

ನ್ಯಾಷನಲ್ ಹೆಲ್ತ್ ಪೋರ್ಟಲ್ ಆಫ್ ಇಂಡಿಯಾದ ಪ್ರಕಾರ ಪ್ರತಿ ವರ್ಷ ಜಾಗತಿಕವಾಗಿ ಸುಮಾರು 7 ಮಿಲಿಯನ್ ಜನರು ವಾಯು ಮಾಲಿನ್ಯದಿಂದ ಸಾಯುತ್ತಾರೆ. ಅವರಲ್ಲಿ 4 ಮಿಲಿಯನ್ ಜನರು ಒಳಾಂಗಣ ವಾಯು ಮಾಲಿನ್ಯದಿಂದ ಸಾಯುತ್ತಿದ್ದಾರೆ.

ಈ ದಿನವು ಹೆಚ್ಚುತ್ತಿರುವ ಗಾಳಿ, ನೀರು ಮತ್ತು ಮಣ್ಣಿನ ಮಾಲಿನ್ಯದ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಕೈಗಾರಿಕಾ ವಿಪತ್ತುಗಳನ್ನು ನಿರ್ವಹಿಸುವ ಮತ್ತು ನಿಯಂತ್ರಿಸುವ ಹಾಗೂ ಕೈಗಾರಿಕಾ ಪ್ರಕ್ರಿಯೆಗಳು ಅಥವಾ ಮಾನವ ನಿರ್ಲಕ್ಷ್ಯದಿಂದ ಉಂಟಾಗುವ ಮಾಲಿನ್ಯವನ್ನು ತಡೆಗಟ್ಟಲು ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತದೆ.

ಸರ್ಕಾರವು ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು (NPCB) ರಚಿಸಿದ್ದು, ಅದು ಕೈಗಾರಿಕೆಗಳು ಮಾಲಿನ್ಯವನ್ನು ನಿಯಂತ್ರಿಸಲು ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸುತ್ತದೆ.

For Quick Alerts
ALLOW NOTIFICATIONS  
For Daily Alerts

English summary
National pollution control day is on december 2. Here is the date, history and significance of the day in kannada.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X