ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸೂಚನೆಗಳು

ಅಭ್ಯರ್ಥಿಗಳು ಆನ್‍ಲೈನ್‍ನಲ್ಲಿ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಸಹಾ ಆನ್‍ಲೈನ್ ಮೂಲಕವೇ ಪಡೆಯತಕ್ಕದ್ದು. ಅಭ್ಯರ್ಥಿಯು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಾಜರಾದ ಮಾತ್ರಕ್ಕೆ ಆಯ್ಕೆಗೆ ಅರ್ಹತೆ ಪಡೆಯುವುದಿಲ್ಲ

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸುವವರು ಗಮನಿಸಬೇಕಾದ ಸೂಚನೆಗಳನ್ನ ಶಿಕ್ಷಣ ಇಲಾಖೆ ಅಧಿಸೂಚನೆಯಲ್ಲಿ ತಿಳಿಸಿದೆ.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸೂಚನೆಗಳನ್ನು ಸಂಪೂರ್ಣ ಓದಿಕೊಂಡು ನಂತರವಷ್ಟೇ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಪ್ರಶ್ನೆಪ್ರತ್ರಿಕೆ ಮತ್ತು ಅಂಕಗಳ ವಿವರಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಪ್ರಶ್ನೆಪ್ರತ್ರಿಕೆ ಮತ್ತು ಅಂಕಗಳ ವಿವರ

ಆ ಸೂಚನೆಗಳು ಈ ಕೆಳಗಿನಂತಿವೆ

  1. ಅಭ್ಯರ್ಥಿಗಳು ಆನ್‍ಲೈನ್‍ನಲ್ಲಿ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಸಹಾ ಆನ್‍ಲೈನ್ ಮೂಲಕವೇ ಪಡೆಯತಕ್ಕದ್ದು. ಅಭ್ಯರ್ಥಿಯು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಾಜರಾದ ಮಾತ್ರಕ್ಕೆ ಆಯ್ಕೆಗೆ ಅರ್ಹತೆ ಪಡೆಯುವುದಿಲ್ಲ. ಅಭ್ಯರ್ಥಿಯು ಇದರ ಜೊತೆಗೆ ಆಯಾ ಹುದ್ದೆಗೆ ನಿಗದಿಪಡಿಸಿರುವ ವಿದ್ಯಾರ್ಹತೆ ಮತ್ತು ವಯೋಮಿತಿ ಹೊಂದಿರತಕ್ಕದ್ದು.
  2. ಅರ್ಜಿಗಳನ್ನು ದಿನಾಂಕ: 25-9-2017 ರೊಳಗೆ ಆನ್‍ಲೈನ್ ಮೂಲಕವೇ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
  3. ಅಭ್ಯರ್ಥಿಗಳು ಎಲ್ಲಾ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಪಡೆದಿರಬೇಕು.
  4. ಪ್ರಮಾಣ ಪತ್ರಗಳ ಪರಿಶೀಲನೆಯ ಸಮಯದಲ್ಲಿ ಸುಳ್ಳು ದಾಖಲೆ ಅಥವಾ ಸುಳ್ಳು ಮಾಹಿತಿ ನೀಡಿರುವುದು ಕಂಡುಬಂದಲ್ಲಿ ಅಂತಹ ಅಭ್ಯರ್ಥಿಗಳು ಆಯ್ಕೆಯಾಗುವ ಅವಕಾಶವನ್ನು ಕಳೆದುಕೊಳ್ಳುತ್ತಾರೆ.
    ಅಭ್ಯರ್ಥಿಗಳಿಗೆ ಸೂಚನೆಗಳು
  5. ಆಯ್ಕೆ ಪಟ್ಟಿಯಲ್ಲಿ ಸೇರ್ಪಡೆಯಾದ ಮಾತ್ರಕ್ಕೆ ಅಭ್ಯರ್ಥಿಗಳು ನೇಮಕಾತಿಗೆ ಹಕ್ಕನ್ನು ಪಡೆದುಕೊಳ್ಳುವುದಿಲ್ಲ.
  6. ಯಾವುದೇ ಹಂತದಲ್ಲಿ ತಪ್ಪು ಮಾಹಿತಿಯ ಆಧಾರದ ಮೇಲೆ ಆಯ್ಕೆಯಾದ ಅಥವಾ ಅನರ್ಹತೆಯ ಕಾರಣಗಳಿಗಾಗಿ ಅಭ್ಯರ್ಥಿಯ ಹೆಸರನ್ನು ಪಟ್ಟಿಯಿಂದ ಕೈಬಿಡುವ ಅಥವಾ ನೇಮಕಾತಿ ಆದೇಶವನ್ನು ರದ್ದುಗೊಳಿಸುವ ಅಧಿಕಾರವನ್ನು ಇಲಾಖೆಯು ಕಾಯ್ದಿರಿಸಿಕೊಂಡಿರುತ್ತದೆ.
  7. ಅಭ್ಯರ್ಥಿಗಳು ಅವರ ಅರ್ಜಿಗಳಲ್ಲಿ ಭರ್ತಿ ಮಾಡಿರುವ ಮಾಹಿತಿಗಳ ಆಧಾರದ ಮೇಲೆ ಅವರಿಗೆ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಪ್ರವೇಶ ಪತ್ರಗಳನ್ನು ನೀಡಲಾಗುತ್ತದೆ. ಆದ್ದರಿಂದ ನಿಗದಿಪಡಿಸಿರುವ ವಯೋಮಿತಿ, ವಿದ್ಯಾರ್ಹತೆ, ಅಂಕಗಳ ಮಾಹಿತಿ, ಮೀಸಲಾತಿ, ಇತ್ಯಾದಿಗಳಿಗೆ ಅನುಗುಣವಾಗಿ ಅರ್ಜಿಯಲ್ಲಿ ಸರಿಯಾದ ಮಾಹಿತಿ ನೀಡುವುದು ಅಭ್ಯರ್ಥಿಗಳ ಜವಾಬ್ದಾರಿಯಾಗಿರುತ್ತದೆ. ಪೂರ್ಣ ಮಾಹಿತಿ ನೀಡದ ಅಥವಾ ತಪ್ಪು ಮಾಹಿತಿ ನೀಡಿದ ಸಂದರ್ಭಗಳಲ್ಲಿ ಮುಂದಿನ ಆಗುಹೋಗುಗಳಿಗೆ ಅಭ್ಯರ್ಥಿಗಳೇ ಜವಾಬ್ದಾರರು.
  8. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಯು ಅರ್ಜಿಯಲ್ಲಿ ನಮೂದಿಸುವ ಮೀಸಲಾತಿ, ಜನ್ಮ ದಿನಾಂಕ, ವಿದ್ಯಾರ್ಹತೆ ಹಾಗೂ ವಯೋಮಿತಿ ಸಡಿಲಿಕೆ ಇತ್ಯಾದಿಗಳಿಗೆ ಸಲ್ಲಿಸಿರುವ ಸಂಬಂಧಿತ ವಿವರಗಳನ್ನು ಮಾತ್ರ ಗಣನೆಗೆ ತೆಗೆದುಕೊಳ್ಳಲಾಗುವುದು.
  9. ಅಭ್ಯರ್ಥಿಗಳು ಸಲ್ಲಿಸಿದ ಆನ್‍ಲೈನ್ ಅರ್ಜಿಯ ಪ್ರತಿ, ಪ್ರವೇಶ ಪತ್ರ, ಶುಲ್ಕ ಪಾವತಿಸಿದ ಚಲನ್‍ಪ್ರತಿ ಹಾಗೂ ಇತರೆ ದಾಖಲೆಗಳನ್ನು ಆಯ್ಕೆ ಪ್ರಕ್ರಿಯೆ ಮುಗಿಯುವ ತನಕ ಸುರಕ್ಷಿತವಾಗಿ ಇಟ್ಟುಕೊಳ್ಳತಕ್ಕದ್ದು.
  10. ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ ನಂತರ ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸುವಾಗ ಮೂಲ ಅರ್ಜಿಯಲ್ಲಿ ದಾಖಲಿಸಿದ ವಿಷಯಗಳಿಗೆ ಸಂಬಂಧಿಸಿದಂತೆ ಮಾತ್ರ ಆಕ್ಷೇಪಣೆ ಸಲ್ಲಿಸಬಹುದು. ನಮೂದಿಸಲು ಬಿಟ್ಟುಹೋಗಿದ್ದ ಯಾವುದೇ ಮಾಹಿತಿಯನ್ನು ಹೊಸದಾಗಿ ದಾಖಲಿಸಲು ಅವಕಾಶವಿರುವುದಿಲ್ಲ. ಅಂತಹ ಆಕ್ಷೇಪಣೆ ಮತ್ತು ಲಗತ್ತುಗಳನ್ನು ಪರಿಗಣಿಸಲಾಗುವುದಿಲ್ಲ.
  11. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ತಮ್ಮ ಪಾಸ್‍ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ, ಸಹಿಯನ್ನು, ಹಾಗು ಎಡಗೈ ಹೆಬ್ಬೆಟ್ಟಿನ ಗುರುತನ್ನು ನಿಗದಿತ ಸ್ಥಳಗಳಲ್ಲಿ ಸ್ಕ್ಯಾನ್ ಮಾಡಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಸಮಯದಲ್ಲಿ ಅಪ್‍ಲೋಡ್ ಮಾಡಬೇಕು.
  12. ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್‍ನ ಸಂಖ್ಯೆಯನ್ನು ನಮೂದಿಸುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ಆಧಾರ್ ಕಾರ್ಡ್ ಹೊಂದಿಲ್ಲದಿದ್ದಲ್ಲಿ, ನೊಂದಣಿ ಮಾಡಿಸಿಕೊಂಡು ಇಐಡಿಯ, ಅಂದರೆ 28 ಅಂಕಿಗಳ ಸಂಖ್ಯೆಯನ್ನು ನಮೂದಿಸಬೇಕು. ಅಂತಿಮ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ, ಆಧಾರ್ ನೋಂದಣಿಯ ನೈಜತೆಯನ್ನ್ನು ಪರಿಶೀಲಿಸಿ, ಅಭ್ಯರ್ಥಿಯ ಗುರುತಿಸುವಿಕೆಯನ್ನು ಖಾತರಿಪಡಿಸಿಕೊಳ್ಳಲಾಗುವುದು.
  13. ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಈ ಸಂಬಂಧ ಆಯ್ಕೆ ಪ್ರಾಧಿಕಾರಿ / ನೇಮಕಾತಿ ಪ್ರಾಧಿಕಾರಿಗಳು ಕಾಲಕಾಲಕ್ಕೆ ನೀಡುವ ಸೂಚನೆಗಳನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್ schooleducation.kar.nic.in ನಲ್ಲಿ ಅವಲೋಕಿಸುವುದು.

ಹೆಚ್ಚಿನ ವಿವರಗಳಿಗೆ ಇಲಾಖೆಯ ವೆಬ್‍ಸೈಟ್ schooleducation.kar.nic.in ರಲ್ಲಿ ನೀಡಿರುವ ಸೂಚನೆಗಳನ್ನು ಗಮನಿಸಬೇಕು. ಹಾಗೂ ಯಾವುದೇ ಹೆಚ್ಚಿನ ಸ್ಪಷ್ಟೀಕರಣಕ್ಕೆ ಆಯ್ಕೆ ಪ್ರಾಧಿಕಾರ ಹಾಗೂ ಜಿಲ್ಲಾ ಉಪನಿರ್ದೇಶಕರು [ಆಡಳಿತ], ಇವರ ಕಛೇರಿಯನ್ನು ಸಂಪರ್ಕಿಸಬಹುದು.

For Quick Alerts
ALLOW NOTIFICATIONS  
For Daily Alerts

English summary
Instructions to candidates who are willing to apply to the post of primary school teacher recruitment.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X