Tap to Read ➤

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2022-2023

ಡೋಲು ಮತ್ತು ನಾದಸ್ವರ ಸಂಗೀತ ತರಬೇತಿಗಾಗಿ ಅರ್ಜಿ ಆಹ್ವಾನ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಡೋಲು ಮತ್ತು ನಾದಸ್ವರ ಸಂಗೀತ ತರಬೇತಿಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 31ರೊಳಗೆ ಅರ್ಜಿಯನ್ನು ಹಾಕಬಹುದು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ನೀಡಲಾಗುವುದು.
ತರಬೇತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ-2ಎ ರಲ್ಲಿ ಬರುವ ಸವಿತಾ ಸಮಾಜ ಅಥವಾ ಅದರ ಉಪಜಾತಿಗಳಿಗೆ ಸೇರಿರಬೇಕು.
ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, ಮೈಸೂರು ಇದರ ಮೂಲಕ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ ತರಬೇತಿಯನ್ನು ನೀಡಲಾಗುವುದು.
ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಮೇ 31,2022ರೊಳಗೆ ಆಯಾ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://bcwd.karnataka.gov.in/ ಗೆ ಭೇಟಿ ನೀಡಿ
ಉದ್ಯೋಗ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text