Tap to Read ➤

ಕಾಮೆಡ್‌ಕೆ ಯುಜಿಇಟಿ ಪರೀಕ್ಷೆ 2022

COMEDK UGET 2022 ಪರೀಕ್ಷೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟ (COMEDK) ಯುಜಿಇಟಿ, ಕರ್ನಾಟಕ ವೃತ್ತಿಪರ ಕಾಲೇಜುಗಳ ಪ್ರತಿಷ್ಠಾನದ ಸದಸ್ಯ ಸಂಸ್ಥೆಗಳಲ್ಲಿ ಎಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಲಾಗುವ ಆನ್‌ಲೈನ್ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮೇ 14,2022ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.
ಮೊದಲು ಅಧಿಕೃತ ವೆಬ್‌ಸೈಟ್‌ comedk.org. ಗೆ ಭೇಟಿ ನೀಡಿ
ಹೋಂ ಪೇಜ್ ನಲ್ಲಿ ಲಭ್ಯವಿರುವ 'COMEDK UGET 2022 ನೋಂದಣಿ' ಲಿಂಕ್ ಅನ್ನು ಕ್ಲಿಕ್ ಮಾಡಿ
ನಂತರ ನೋಂದಣಿ/ಲಾಗಿನ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಅಭ್ಯರ್ಥಿಗಳು ನಿಮ್ಮ ಐಡಿ ಮತ್ತು ಪಾಸ್‌ವರ್ಡ್ ಬಳಸಿ ಲಾಗಿನ್ ಮಾಡಿ
COMEDK UGET ಅರ್ಜಿಯನ್ನು ಭರ್ತಿ ಮಾಡಿ ಮತ್ತು ಎಲ್ಲಾ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ
ಅಭ್ಯರ್ಥಿಗಳು ಅರ್ಜಿ ನಮೂನೆ ಸಲ್ಲಿಕೆಗೆ ಜೊತೆಗೆ ನಿಗದಿತ ಪರೀಕ್ಷಾ ಶುಲ್ಕವನ್ನು ಪಾವತಿಸಿ
ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿದ ನಂತರ ಡೌನ್‌ಲೋಡ್ ಮಾಡಿ ಪ್ರಿಂಟೌಟ್‌ ತೆಗೆದುಕೊಳ್ಳಿ
ಕಾಮೆಡ್‌ಕೆ ಯುಜಿಇಟಿ ಸೇರಿದಂತೆ ಇತರೆ ಪರೀಕ್ಷೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಕರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text