Tap to Read ➤

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ನಾಳೆ ಪ್ರಕಟ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ ತಿಳಿಯಿರಿ.
2021-22ನೇ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆಯ ಫಲಿತಾಂಶವು ನಾಳೆ ಮಧ್ಯಾಹ್ನ 12:30ಕ್ಕೆ ಪ್ರಕಟವಾಗಲಿದೆ. ಫಲಿತಾಂಶ ಪ್ರಕಟವಾದ ಬಳಿಕ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಫಲಿತಾಂಶವನ್ನು ವೀಕ್ಷಿಸಬಹುದು.
ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆಯನ್ನು ಮಾರ್ಚ್ 28 ರಿಂದ ಏಪ್ರಿಲ್ 11 ರ ವರೆಗೆ ಕರ್ನಾಟಕದೆಲ್ಲೆಡೆ ಒಟ್ಟು 3,440 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿತ್ತು.
ಕರ್ನಾಟಕ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆಗೆ ಒಟ್ಟು 8.73 ಲಕ್ಷ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು. ಈ ಪೈಕಿ 4.21 ಲಕ್ಷ ವಿದ್ಯಾರ್ಥಿನಿಯರು ಮತ್ತು 4.52 ಲಕ್ಷ ವಿದ್ಯಾರ್ಥಿಗಳಿದ್ದರು. ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ.
ವಿದ್ಯಾರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ sslc.karnataka.gov.in ಮತ್ತು karresults.nic.in. ಗೆ ಭೇಟಿ ನೀಡಿ
ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಈಗ ಅಭ್ಯರ್ಥಿಗಳು ನಿಮ್ಮ ರೋಲ್ ನಂಬರ್ ಮತ್ತು ಇತರೆ ಮಾಹಿತಿ ನಮೂದಿಸಿ
ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು, ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
Add Button Text