Tap to Read ➤

ಪಂಜಾಬ್ ನ್ಯಾಷನಲ್ ಬ್ಯಾಂಕ್ ಪ್ರವೇಶ ಪತ್ರ ಪ್ರಕಟ

ಪಂಜಾಬ್ ನ್ಯಾಷನ್ ಬ್ಯಾಂಕ್ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ತಿಳಿಯಿರಿ
ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 145 ವ್ಯವಸ್ಥಾಪಕ ಮತ್ತು ಹಿರಿಯ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಏಪ್ರಿಲ್ 22,2022 ರಿಂದ ಮೇ 7,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.
ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿಯ ವ್ಯವಸ್ಥಾಪಕ ಮತ್ತು ಹಿರಿಯ ವ್ಯವಸ್ಥಾಪಕ ಹುದ್ದೆಗಳ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ತಿಳಿಯಿರಿ.
ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.pnbindia.in/ ಗೆ ಭೇಟಿ ನೀಡಿ.
ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಪಾಸ್‌ವರ್ಡ್ ನಮೂದಿಸಿ
ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ
Add Button Text