Tap to Read ➤

ಸಮಾಜ ಕಲ್ಯಾಣ ಇಲಾಖೆ

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಅರ್ಜಿ ಆಹ್ವಾನ
kavya L
ಸಮಾಜ ಕಲ್ಯಾಣ ಇಲಾಖೆಯು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತರಿಂದ ಅರ್ಜಿಯನ್ನು ಆಹ್ವಾನಿಸಿದೆ. ತರಬೇತಿಯ ಸಂಪೂರ್ಣ ವಿವರ ಇಲ್ಲಿದೆ.
ಈ ತರಬೇತಿಗೆ ಪದವಿ ವಿದ್ಯಾರ್ಹತೆಯುಳ್ಳವರು ಅರ್ಜಿ ಸಲ್ಲಿಸಲು ಅರ್ಹರು.
ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ತರಬೇತಿಗೆ ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರವರ ಮೂಲಕ ಸಾಮಾನ್ಯ ಪ್ರವೇಶ ನಡೆಸಿ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
ಅಭ್ಯರ್ಥಿಯ ಕುಟುಂಬದ ಆದಾಯ 5 ಲಕ್ಷಗಳ ಒಳಗಿರಬೇಕು.
ಅಭ್ಯರ್ಥಿಗಳಿಗೆ ಶಿಷ್ಯವೇತನವನ್ನು ಸರ್ಕಾರದಿಂದ ಬಂದ ಕೂಡಲೇ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಾಕಲಾಗುವುದು ಮತ್ತು ತರಬೇತಿ ವೆಚ್ಚವನ್ನು ತರಬೇತಿ ಸಂಸ್ಥೆಗಳಿಗೆ ಪಾವತಿಸಲಾಗುವುದು.
ಅಭ್ಯರ್ಥಿಗಳು ವೆಬ್‌ಸೈಟ್‌ https://sw.kar.nic.in/index.aspx ನಲ್ಲಿ ಅರ್ಜಿಯನ್ನು ಹಾಕಬಹುದು.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.20,2022 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text